ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗೆ 31 ದಿನಗಳ ಕಾಲಾವಧಿಯ ಉಚಿತ ಮೊಬೈಲ್ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತಕರು 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 15-07-2025 ಮಂಗಳವಾರ ಸಂಸ್ಥೆಯಲ್ಲಿ ನಡೆಯುವ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644ಸಂಪರ್ಕಿಸಬಹುದಾಗಿದೆ.
*ವಿಶೇಷ ಸೂಚನೆ:- ಹೊಸಕೋಟೆಯಿಂದ ತರಬೇತಿ ಸಂಸ್ಥೆಗೆ, ತರಬೇತಿಗೆ ಬರಲು BMTC ಬಸ್ ವ್ಯವಸ್ಥೆ ಇರುತ್ತದೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…