ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 8 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…