ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್…
ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು…