ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ನಿರುದ್ಯೋಗ ಯುವಕ/ಯುವತಿಯರಿಗೆ ಉಚಿತವಾಗಿ ಲಘು/ಭಾರಿ ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ ವಿತರಣೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ ವಿತರಣೆ ಮಾಡುವ ಕಾರ್ಯಕ್ರಮದಡಿ ಆಸಕ್ತ ಅಭ್ಯರ್ಥಿಗಳು ksrtcjobs.karnataka.gov.in ವೆಬ್ಸೈಟ್ ನಲ್ಲಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 45 ವಯೋಮಿತಿ ಹೊಂದಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿಬೇಕು. ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಸಮುದಾಯದ ನಿರುದ್ಯೋಗ ಯುವಕ/ಯುವತಿಯರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಂಸ್ಥೆಯ ಮೂಲಕ ನೋಂದಾಯಿಸಿಕೊಳ್ಳಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!