ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 13 ದಿನಗಳ ಕಾಲಾವಧಿಯ ಉಚಿತ ಸಿ.ಸಿ.ಟಿ.ವಿ ಕ್ಯಾಮರಾ ಇನ್ಸ್ಟಾಲೇಶನ್ ಮತ್ತು ಸರ್ವೀಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು ಅಕ್ಟೋಬರ್ 17 ಮಂಗಳವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ತರಬೇತಿಯು ಅಕ್ಟೋಬರ್ 25 ಗುರುವಾರದಿಂದ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644, 9535774621 ಸಂಪರ್ಕಿಸಬಹುದಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…