ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ವತಿಯಿಂದ 2023-24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ 624 ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಗ್ರಾಮ ಪಂಚಾಯಿತಿ ಧೃಢೀಕರಣದೊಂದಿಗೆ ಅ.31 ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಕೈಗಾರಿಕ ವಿಸ್ತರಣಾಧಿಕಾರಿ ಕಚೇರಿಗೆ ಸಲ್ಲಿಸುವುದು.
ನಿಬಂದನೆಗಳು:
1. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ
2. ಅರ್ಜಿದಾರರು ಗ್ರಾಮದಲ್ಲಿ ವಾಸವುಳ್ಳವರಾಗಿರಬೇಕು.
3. ಸಮಾಜದಲ್ಲಿ ಸಾಮಾಜಿಕ ತೊಂದರೆಗೊಳಗಾದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು (ವಿಧವೆಯರು, ವಿಚ್ಛೇದಿತರು, ಅನಾಥರು)
4. ಉಚಿತ ಉಪಕರಣ ಪಡೆಯಲು ಜಿಲ್ಲೆಯ 624 ಗ್ರಾಮೀಣ ಆಧುನಿಕ ಕಸುಬುಗಳಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ವಿದ್ಯುತ್ ಚಾಲಿತ ಉಪಕರಣಗಳಾದ Welding, Barbending, Carpentry, Motor rewinding, plumbing and Electrician, ಬಡಗಿ, ಕಮ್ಮಾರಿಕೆ, ಕಲ್ಲುಕುಟಿಕೆ, ದೋಬಿ, ಗಾರೆ, ಮತ್ತು ಇತ್ಯಾದಿ ಕೆಲಸದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತಾ ಸಲಕರಣ ಕಿಟ್‌ಗಳನ್ನು ನೀಡುವ ಕಾರ್ಯಕ್ರಮ
5. ಕುಶಲಕರ್ಮಿಗಳು ಮಾತ್ರ ಅರ್ಜಿಸಲ್ಲಿಸತಕ್ಕದ್ದು.
6. ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.
7. ಈ ಇಲಾಖೆಯ ಯಾವುದೇ ಯೋಜನೆಯಡಿ ಈಗಾಗಲೇ ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
8. ಸರ್ಕಾರದ ಮಾರ್ಗಸೂಚಿಯಂತೆ ಮೀಸಲಾತಿ ಅನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…