ಉಚಿತ ಸುಧಾರಿತ ಸಲಕರಣೆ ಪಡೆಯಲು ವೃತ್ತಿಪರ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ವತಿಯಿಂದ 2023-24ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ 624 ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಗ್ರಾಮ ಪಂಚಾಯಿತಿ ಧೃಢೀಕರಣದೊಂದಿಗೆ ಅ.31 ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಕೈಗಾರಿಕ ವಿಸ್ತರಣಾಧಿಕಾರಿ ಕಚೇರಿಗೆ ಸಲ್ಲಿಸುವುದು.

ನಿಬಂದನೆಗಳು:

1. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 18 ವರ್ಷ

2. ಅರ್ಜಿದಾರರು ಗ್ರಾಮದಲ್ಲಿ ವಾಸವುಳ್ಳವರಾಗಿರಬೇಕು.

3. ಸಮಾಜದಲ್ಲಿ ಸಾಮಾಜಿಕ ತೊಂದರೆಗೊಳಗಾದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು (ವಿಧವೆಯರು, ವಿಚ್ಛೇದಿತರು, ಅನಾಥರು)

4. ಉಚಿತ ಉಪಕರಣ ಪಡೆಯಲು ಜಿಲ್ಲೆಯ 624 ಗ್ರಾಮೀಣ ಆಧುನಿಕ ಕಸುಬುಗಳಲ್ಲಿ ತೊಡಗಿರುವ ಕುಶಲ ಕರ್ಮಿಗಳಿಗೆ ವಿದ್ಯುತ್ ಚಾಲಿತ ಉಪಕರಣಗಳಾದ Welding, Barbending, Carpentry, Motor rewinding, plumbing and Electrician, ಬಡಗಿ, ಕಮ್ಮಾರಿಕೆ, ಕಲ್ಲುಕುಟಿಕೆ, ದೋಬಿ, ಗಾರೆ, ಮತ್ತು ಇತ್ಯಾದಿ ಕೆಲಸದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತಾ ಸಲಕರಣ ಕಿಟ್‌ಗಳನ್ನು ನೀಡುವ ಕಾರ್ಯಕ್ರಮ

5. ಕುಶಲಕರ್ಮಿಗಳು ಮಾತ್ರ ಅರ್ಜಿಸಲ್ಲಿಸತಕ್ಕದ್ದು.

6. ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.

7. ಈ ಇಲಾಖೆಯ ಯಾವುದೇ ಯೋಜನೆಯಡಿ ಈಗಾಗಲೇ ಉಪಕರಣಗಳನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.

8. ಸರ್ಕಾರದ ಮಾರ್ಗಸೂಚಿಯಂತೆ ಮೀಸಲಾತಿ ಅನ್ವಯ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

20 minutes ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

44 minutes ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

7 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

19 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

23 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago