ಉತ್ತಮ ಆಡಳಿತಕ್ಕಾಗಿ ಕೆ.ಆರ್.ಎಸ್ ಪಕ್ಷ ಬೆಂಬಲಿಸಿ- ರವಿಕೃಷ್ಣಾ ರೆಡ್ಡಿ

ಕೆ.ಆರ್.ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ತೆರಿಗೆಯನ್ನು ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡುತ್ತೇವೆ, ಬೆಲೆ ಏರಿಕೆಯನ್ನು ಕಡಿಮೆ ಮಾಡಿ ಜನರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ ಎಂದು ಕೆ.ಆರ್.ಎಸ್ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಮತ್ತು ಸದಸ್ಯತ್ವ ನೋಂದಣಿ ಕಾರ್ಯಕ್ರಮವನ್ನು ಕೆ.ಆರ್ ಮಾರುಕಟ್ಟೆ ವೃತ್ತದ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಶಾಲಾ ಶುಲ್ಕ ಕಡಿತ , ಆರೋಗ್ಯ ಸೇವೆ ಸೇರಿದಂತೆ ಇತರ ಸೇವೆಗಳನ್ನು ನಮ್ಮ ಪಕ್ಷದ ವತಿಯಿಂದ ಉಚಿತವಾಗಿ ನೀಡುವ ಸಂಕಲ್ಪ ಮಾಡಿದ್ದೇವೆ ಹೀಗಾಗಿ ಜನತೆ ಕೆ.ಆರ್.ಎಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದರು.

ನಮ್ಮ ಪಕ್ಷ ಕಡು ಭ್ರಷ್ಟರ ವಿರುದ್ದ ಹೋರಾಟ ನಡೆಸುತ್ತಿದೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಹಣ, ಹೆಂಡ ಹಂಚಲು ಬಂದಾಗ ಹಿಡುದು ಪ್ರಶ್ನೆ ಮಾಡಬೇಕು, ಹಣವನ್ನು ಸೀಜ್ ಮಾಡಬೇಕು, ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ‌ ಅಪರಾಧ, ಹಣ ಹಂಚಿಕೆ‌ ಎಲ್ಲೇ ಮಾಡಿದರು ಹಿಡಿದು ಪೊಲೀಸರ ಗಮನಕ್ಕೆ ತರಬೇಕು ಎಂದು ತಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ‌ ಮಾಡಲು ಬಂದಿರುವವರು ರಿಯಲ್ ಎಸ್ಟೇಟ್ ಉದ್ಯಮಿಗಳು, ಜೆಸಿಬಿ ಪಕ್ಷಗಳಿಂದ ಸ್ಪರ್ಧೆ ಮಾಡುವವರು ಸಾವಿರಾರು ಕೋಟಿ ರೂಪಾಯಿಗಳ ಒಡೆಯರು, ಈ ಬಾರಿ ನಮ್ಮ ವೋಟುಗಳನ್ನು ಕೊಳ್ಳುವುದಕ್ಕೆ ನಾವು ಬಿಡಬಾರದು, ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗಳ ಏಳಿಗೆಗಾಗಿ ನಮ್ಮ ಕೆ.ಆರ್.ಎಸ್ ಪಕ್ಷವನ್ನು ಬೆಂಬಲಿಸಿ ಎಂದರು.

ಈ ವೇಳೆ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಶಿವಶಂಕರ್ ಸೇರಿದಂತೆ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

5 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

8 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

10 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

10 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

12 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

16 hours ago