ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಚೇರಿ ವತಿಯಿಂದ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯು ನಮ್ಮ ದೇಶದ ಸಾಂಸ್ಕೃತಿಕ ಸಂಪತ್ತನ್ನು ಸೂಚಿಸುತ್ತದೆ. ಆಧುನಿಕ ಯುಗದಲ್ಲಿ ಯೋಗಾಭ್ಯಾಸ ಅತ್ಯವಶ್ಯಕವಾಗಿದೆ. ಯೋಗ ಮಾಡುವುದರಿಂದ ದೈಹಿಕವಾಗಿ ಆಗುವ ಲಾಭವನ್ನು ತಂದೆ-ತಾಯಿಗೆ ತಿಳಿಸಿರಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿ, ಪ್ರತಿಯೊಬ್ಬರು ಯೋಗಾಭ್ಯಾಸ ಮಾಡುವುದನ್ನು ದಿನನಿತ್ಯದ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ಅಭಿನಂದನಾ ಪತ್ರ ಹಾಗೂ ಆಯುಷ್ ಇಲಾಖೆಯ ಆರೋಗ್ಯ ಪುಸ್ತಕವನ್ನು ನೀಡಲಾಯಿತು.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…