ಜಾಗತೀಕರಣದ ನಂತರ ದೇಶದಲ್ಲಿ ಎಲ್ಲಾ ಕ್ಷೇತ್ರಗಳು ಅಭಿವೃದ್ಧಿ ಹೊಂದುತ್ತಿರುವುದರಿಂದ ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಕೌಶಲ್ಯ ಭರಿತವಾಗಿಸಬೇಕು. ಭಾರತ ದೇಶದಲ್ಲಿ ಯುವ ಶಕ್ತಿಯ ಸಂಖ್ಯೆ ಅಧಿಕವಾಗಿದೆ. ಗ್ರಾಮಾಂತರ ಜಿಲ್ಲೆಗೆ ಹೆಚ್ಚೆಚ್ಚು ವಿದೇಶಿ ಕಂಪನಿಗಳು ಕಾಲಿಡುತ್ತಿವೆ, ಅವುಗಳ ಸದುಪಯೋಗ ಮಾಡಿಕೊಳ್ಳಬೇಕು. ಒಳ್ಳೆಯ ಜೀವನೋಪಾಯಕ್ಕೆ ಕೌಶಲ್ಯ ಅತಿ ಮುಖ್ಯ ಎಂದು ಕೌಶಲ್ಯಾಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಸಿ.ಜಗನ್ನಾಥ ಹೇಳಿದರು.
ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಪೀಳಿಗೆಗೆ ಆತ್ಮವಿಶ್ವಾಸ ಇರಬೇಕು. ಸಿಗುವ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮಾಜದಲ್ಲಿ ಸಂವಹನ ನಡೆಸಲು ಕೌಶಲ್ಯ ಬೇಕು ಎಂದು ಹೇಳಿದರು.
ಪ್ರಪಂಚದ ಜೊತೆಗೆ ನಮ್ಮ ಸುತ್ತಮುತ್ತ ನಡೆಯುವ ಪ್ರತಿಯೊಂದು ಆಗುಹೋಗುಗಳನ್ನು ತಿಳಿದುಕೊಂಡಿರಬೇಕು. ಸ್ಪರ್ಧೆಯನ್ನು ಎದುರಿಸಲು ಕೌಶಲ್ಯವನ್ನು ತಳಪಾಯದಿಂದ ಅರಿತುಕೊಳ್ಳಬೇಕು. ಕೌಶಲ್ಯದಿಂದ ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯವನ್ನು ಕಾಣಬಹುದು ಎಂದು ಪ್ರಾಂಶುಪಾಲರಾದ ಡಾ. ಸದಾಶಿವರಾಮಚಂದ್ರ ಅಭಿಪ್ರಾಯಪಟ್ಟರು.
ಈ ಕಾರ್ಯಕ್ರಮದಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆಗಳು ಹಾಗೂ ಕೌಶಲ್ಯ ತರಬೇತಿ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಇಲಾಖೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…