ಉದ್ಯಮಶೀಲತಾ ತಿಳುವಳಿಕ ಶಿಬಿರ: ಆಸಕ್ತರು‌ ಭಾಗವಹಿಸಿ

ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು. ಜಿಲ್ಲಾ ಕೈಗಾರಿಕಾ ಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕ ಶಿಬಿರ ಕಾರ್ಯಕ್ರಮವನ್ನು ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು  ಡಿ.16ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ವಿನಂತಿಸಲಾಗಿದೆ. ಭಾಗವಹಿಸುವವರು ಕನಿಷ್ಠ 18 ವರ್ಷ ಮೇಲ್ಪಟ್ಟ 70 ವರ್ಷ ಒಳಗಿನ ಅಭ್ಯರ್ಥಿಗಳಾಗಿರಬೇಕು.

ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಯೋಜನೆಗಳ ಆಯ್ಕೆ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ದಿ ತರಬೇತಿ ಬಗ್ಗೆ ಮಾಹಿತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಂಟಿ ನಿದೇಶಕರ ಕಚೇರಿ-ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9731762200 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!