ಉದ್ಯಮಶೀಲತೆಯು ಕೇವಲ ಲಾಭದಾಯಕ ವ್ಯವಹಾರಗಳನ್ನು ಸೃಷ್ಟಿಸುವುದಲ್ಲದೆ, ಉದ್ಯೋಗಾವಕಾಶಗಳನ್ನು ಒದಗಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತದೆ ಎಂದು ಬಿ.ಎಸ್.ಎನ್.ಎಲ್ ಲೆಕ್ಕಾಧಿಕಾರಿ ಪ್ರಸನ್ನ ಕುಮಾರ್ ಹೇಳಿದರು.
ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆ ಮತ್ತು ನಾವಿನ್ಯತೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯಮಶೀಲತೆಯು ಕೇವಲ ವ್ಯವಹಾರಕ್ಕೆ ಸೀಮಿತವಾಗಿಲ್ಲ, ಬದಲಿಗೆ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಮತ್ತು ಮೌಲ್ಯವನ್ನು ಸೃಷ್ಟಿಸುವ ಕ್ರಿಯೆಯೂ ಆಗಿದೆ, ಉದ್ಯಮವನ್ನು ಸ್ಥಾಪಿಸುವ ಹಾಗೂ ವ್ಯವಹಾರ ಮಾಡುವ ಸಂದರ್ಭದಲ್ಲಿ ಡಿಜಿಟಲ್ ಪೇಮೆಂಟ್ ಗಳಾದ ಪೇಟಿಎಂ, ಗೂಗಲ್ ಪೇ, ಇವುಗಳ ಕಡೆ ಹೆಚ್ಚಿನ ಗಮನವಿರಬೇಕು ಅಲ್ಲದೆ ಆನ್ಲೈನ್ ವ್ಯವಹಾರಗಳಲ್ಲಿ ಆದಷ್ಟು ನೋಡಿಕೊಂಡು ವ್ಯವಹಾರವನ್ನು ಮಾಡಬೇಕು ಇಲ್ಲವಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ. ಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಮಧುಶ್ರೀ ಪ್ರಾಧ್ಯಾಪಕರಾದ ಕಿರಣ್, ದಿವ್ಯ, ರಮ್ಯಾ, ಭಾನುಶ್ರೀ ಮತ್ತಿತರರು ಹಾಜರಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…