ಉಪ ಮುಖ್ಯಮಂತ್ರಿ ಡಿಕೆಶಿ ಕಾಂಗ್ರೆಸ್ ಪಕ್ಷದ ಹೊಸ ಹಿಂದುತ್ವವಾದಿಯಾಗಿ ಹೊರಹೊಮ್ಮುತ್ತಿದ್ದಾರೆಯೇ?: ಅಮಿತ್ ಶಾ ಜೊತೆಗೆ ಡಿಕೆಶಿ ಇರುವ ಫೋಟೋ ವೈರಲ್: ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ನ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಭಾಗವಹಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಉಭಯ ಪಕ್ಷದ ನಾಯಕರು ಒಟ್ಟಿಗೆ ಇರುವ ಫೋಟೋಗಳು ವೈರಲ್ ಆಗುತ್ತಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಒಟ್ಟಿಗೆ‌ ಇರುವುದು ರಾಜಕೀಯವಾಗಿ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

ರಾಹುಲ್ ಗೆ ಅವಮಾನಿಸಿದ್ದ ಜಗ್ಗಿ ವಾಸುದೇವ್, ಅಮಿತ್ ಶಾ ಜೊತೆ ವೇದಿಕೆ ಹಂಚಿಕೆಕೊಂಡಿದ್ದಾರೆ. ಇದೆಲ್ಲಾ ಸರಿ ಅಲ್ಲ… ಎಂದು ಡಿಕೆಶಿಗೆ ಹೈಕಮಾಂಡ್ ವಾರ್ನಿಂಗ್‌ ಕೂಡ ಕೊಟ್ಟಿದೆ.

 

ಸದ್ಗುರು ಅವರ ಮಾತುಗಳಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯದ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ‌ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್ ಗಳು ಮನಸ್ಸಿಗೆ ಹಿತ ನೀಡಿದವು ಎಂದು ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ಬರೆದುಕೊಂಡಿದ್ದಾರೆ.

ಜೀವನವೆಂದರೆ ಅನಂತ ಯಾತ್ರೆ. ಪ್ರತಿ ಕ್ಷಣವೂ ಒಂದು ಅಧ್ಯಾಯ, ಪ್ರತಿ ನಗುವೂ ಮತ್ತು ಆಲೋಚನೆಯೂ ನಮ್ಮ ಆಂತರಿಕ ಬೆಳಕಿಗೆ ಪೂರಕ. ನಿಜವಾದ ಸಂಪತ್ತು ಅಂದರೆ, ಆಂತರಿಕ ಶಾಂತಿ, ಆತ್ಮ-ಸಾಕ್ಷಾತ್ಕಾರ ಮತ್ತು ಆ ಭಾವನೆ, ಬದುಕಿನ ಪ್ರತಿಯೊಂದು ಕ್ಷಣದಲ್ಲಿ ಜೀವಂತವಾಗಿರುವ ಸತ್ಯ ಎಂದು ಬರೆದಿದ್ದಾರೆ.

ಬದುಕು, ಆಧ್ಯಾತ್ಮದ ಕುರಿತು ಸದ್ಗುರು ಅವರೊಂದಿಗೆ ಸುದೀರ್ಘ ಮಾತುಕತೆ. ಇಲ್ಲಿ ಜ್ಞಾನವು ನದಿಯಂತೆ ಹರಿಯಿತು, ಅವರ ಪ್ರತೀ ಮಾತುಗಳೂ ತಾರ್ಕಿತ ಸತ್ಯ ಎನಿಸಿದವು. ಜೀವನ, ಆಧ್ಯಾತ್ಮಿಕತೆ ಮತ್ತು ಅದರಾಚೆಗಿನ ನನ್ನ ಸಂದೇಹಗಳು – ಸದ್ಗುರುವಿನ ಸಮ್ಮುಖದಲ್ಲಿ ಅನಾವರಣಗೊಂಡವು, ಅವಕ್ಕೆ ಸೂಕ್ತ ಉತ್ತರಗಳೂ ಸಿಕ್ಕವು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

11 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

21 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago