ಉರ್ದು ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಅನುಮಾನಾಸ್ಪದ ಸ್ಫೋಟ: ವಿದ್ಯಾರ್ಥಿಗೆ ಗಾಯ: ಆಸ್ಪತ್ರೆಗೆ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಜಿಲ್ಲಾ ಗ್ರಂಥಾಲಯ ಮುಂಬಾಗದಲ್ಲಿರುವ, ಸರಕಾರಿ ಉರ್ದು ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ನೀರಿನ ಜಗ್ ಸ್ಫೋಟಗೊಂಡು 7 ನೇ ತರಗತಿ ವಿದ್ಯಾರ್ಥಿಗೆ ಗಾಯಗಳಾಗಿವೆ.

ಗಾಯಾಳುವನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ರವಾನಿಸಲಾಗಿದೆ.

ಶಾಲೆಯಲ್ಲಿ ಕಲಿಯಲು ಬಂದಿದ್ದ ವಿದ್ಯಾರ್ಥಿ, ಮೂತ್ರವಿಸರ್ಜನೆಗೆಂದು ಶೌಚಾಲಯಕ್ಕೆ ಹೋಗಿದ್ದು, ಶೌಚಾಲಯದಲ್ಲಿ ಸ್ಫೋಟಗೊಂಡ ಶಬ್ದವನ್ನು ಕೇಳಿ, ವಿದ್ಯಾರ್ಥಿ, ಬೇಗನೇ ತರಗತಿ‌ ಕೊಠಡಿಯೊಳಗೆ ಬಾರದಿರುವುದನ್ನು ಗಮನಿಸಿದ ಶಿಕ್ಷಕರು, ಬೇರೊಬ್ಬ ವಿದ್ಯಾರ್ಥಿಯನ್ನು ಕರೆದುಕೊಂಡು ಬರುವಂತೆ ಹೇಳಿದ್ದು, ವಿದ್ಯಾರ್ಥಿ ಹೋಗುವಷ್ಟರಲ್ಲಿ, ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿಯ ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ.

ತಕ್ಷಣ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಶಿಕ್ಷಕರು, ಕೂಡಲೇ, ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ‌‌‌ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!