ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಜಿಲ್ಲಾ ಗ್ರಂಥಾಲಯ ಮುಂಬಾಗದಲ್ಲಿರುವ, ಸರಕಾರಿ ಉರ್ದು ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ನೀರಿನ ಜಗ್ ಸ್ಫೋಟಗೊಂಡು 7 ನೇ ತರಗತಿ ವಿದ್ಯಾರ್ಥಿಗೆ ಗಾಯಗಳಾಗಿವೆ.
ಗಾಯಾಳುವನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ರವಾನಿಸಲಾಗಿದೆ.
ಶಾಲೆಯಲ್ಲಿ ಕಲಿಯಲು ಬಂದಿದ್ದ ವಿದ್ಯಾರ್ಥಿ, ಮೂತ್ರವಿಸರ್ಜನೆಗೆಂದು ಶೌಚಾಲಯಕ್ಕೆ ಹೋಗಿದ್ದು, ಶೌಚಾಲಯದಲ್ಲಿ ಸ್ಫೋಟಗೊಂಡ ಶಬ್ದವನ್ನು ಕೇಳಿ, ವಿದ್ಯಾರ್ಥಿ, ಬೇಗನೇ ತರಗತಿ ಕೊಠಡಿಯೊಳಗೆ ಬಾರದಿರುವುದನ್ನು ಗಮನಿಸಿದ ಶಿಕ್ಷಕರು, ಬೇರೊಬ್ಬ ವಿದ್ಯಾರ್ಥಿಯನ್ನು ಕರೆದುಕೊಂಡು ಬರುವಂತೆ ಹೇಳಿದ್ದು, ವಿದ್ಯಾರ್ಥಿ ಹೋಗುವಷ್ಟರಲ್ಲಿ, ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿಯ ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ.
ತಕ್ಷಣ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಶಿಕ್ಷಕರು, ಕೂಡಲೇ, ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…