ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಜನತಾದಳವು ಎಂದಿಗೂ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ. ಜಾತ್ಯತೀತ ನಿಲುವಿನ ಆಧಾರದ ಮೇಲೆಯೇ ಪಕ್ಷವನ್ನು ಕಟ್ಟಲಾಗಿದೆ. ಎಲ್ಲ ಧರ್ಮ, ಸಮಾಜ ಹಾಗೂ ಆಚಾರ-ವಿಚಾರಗಳನ್ನು ಗೌರವಿಸಿ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಹೀಗಾಗಿ ಉರ್ದು ಹಬ್ಬದ ವಿಚಾರವನ್ನು ವಿಶೇಷವಾಗಿ ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ ಎಂದರು.
ಒಂದು ಧರ್ಮವನ್ನು ಓಲೈಸಲು ಮತ್ತೊಂದು ಧರ್ಮವನ್ನು ಕೀಳಾಗಿ ನೋಡುವ ಮನೋಭಾವದಿಂದ ಹೊರಬರಬೇಕು. ಎಲ್ಲ ಧರ್ಮಗಳನ್ನೂ ಸಮಾನವಾಗಿ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಸ್ವಾಮೀಜಿಗಳ ಮುಂದೆ ಸಿಎಂ ಹೇಳಿಕೆ ಖಂಡನೀಯ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೀರಶೈವ ಸ್ವಾಮೀಜಿಗಳ ವಿಚಾರವಾಗಿ ನೀಡಿರುವ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಸ್ವಾಮೀಜಿಗಳ ಮುಂದೆ ನಿಂತು ಮಾತನಾಡಿರುವ ರೀತಿ ಬಹಳ ಖಂಡನೀಯ. ‘ನಮ್ಮ ಸೇವೆ ಮಾಡಿದರೆ ನಿಮಗೆ ಸಹಕಾರ ನೀಡುತ್ತೇವೆ’ ಎಂಬ ರೀತಿಯ ಮಾತುಗಳನ್ನು ಸ್ವಾಮೀಜಿಗಳ ಮುಂದೆ ಹೇಳುವುದು ಸರಿಯಲ್ಲ. ಇಂತಹ ಉದ್ಧಟತನ ಹಾಗೂ ದುರಹಂಕಾರದ ಮಾತುಗಳನ್ನು ಮುಖ್ಯಮಂತ್ರಿ ಅವರು ಬಿಡಬೇಕು ಎಂದು ಆಗ್ರಹಿಸಿದರು.
ಎಲ್ಲರನ್ನೂ ಹಾಗೂ ಎಲ್ಲ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ಧಾರ್ಮಿಕ ಮುಖಂಡರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಅಂಗವಾಗಿ ಅರಮನೆ ಆವರಣದಲ್ಲಿ ನಡೆದ ಐತಿಹಾಸಿಕ ಜಂಬೂಸವಾರಿಗೆ ಶುಭ ಮೀನ ಲಗ್ನದಲ್ಲಿ…
ಕೊರೋನಾ ಮಾರಿಯ ನಂತರದಲ್ಲಿ ವಿಶ್ವದ ಒಟ್ಟಾರೆ ಪರಿಸ್ಥಿತಿ ಪ್ರಕ್ಶುಬ್ಧವಾಗಿಯೇ ಮುಂದುವರಿದಿದೆ. ಕೋವಿಡ್ ನಿಂದಾದ ನಷ್ಟದಿಂದ ಆರ್ಥಿಕ ಚೇತರಿಕೆ ಕಂಡುಕೊಳ್ಳಬೇಕಾದ ಸಂದರ್ಭದಲ್ಲಿ…
ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದಾಗಿ…
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…