ಉಳುಮೆ ಮಾಡುವ ವೇಳೆ ಟ್ರಾಕ್ಟರ್ ಮುಗುಚಿಬಿದ್ದ ಪರಿಣಾಮ ರೈತ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾಪುರದಲ್ಲಿ ನಡೆದಿದೆ.
ಮೃತರನ್ನು ಚೆನ್ನಾಪುರ ಗ್ರಾಮದ ನಿವಾಸಿ 50 ವರ್ಷದ ಚಂದ್ರಪ್ಪ (ಹೈಟೆಕ್ ಚಂದ್ರು) ಎಂದು ಗುರುತಿಸಲಾಗಿದೆ.
ಮುಂಗಾರು ಪ್ರಾರಂಭವಾಗಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಇಂದು ಸ್ವಂತ ಜಮೀನಿನಲ್ಲಿ ಉಳುಮೆ ಮಾಡುವಾಗ ನಿಯಂತ್ರಣ ತಪ್ಪಿದ ಟ್ರಾಕ್ಟರ್ ಪಲ್ಟಿಯಾಗಿದೆ. ಘಟನೆಯಲ್ಲಿ ಚಂದ್ರಪ್ಪ ಟ್ರಾಕ್ಟರ್ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಮಡದಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…