Categories: ಕೋಲಾರ

ಉಸ್ತುವಾರಿ ಸಚಿವರ ಬದಲಾವಣೆಗೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲೆಯ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಜಿಲ್ಲೆಯ ನಾಡಿ ಮಿಡಿತವಿರುವ ಸಚಿವರನ್ನು ನೇಮಕ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಈ ಕುರಿತು ನಗರ ಹೊರವಲಯದ ಅರಣ್ಯ ಉದ್ಯಾನವನದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಅವರು ನಾಮಕಾವಸ್ತೆ ಹಾಗೂ ಪಕ್ಷದ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗುವ ಜೊತೆಗೆ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಬಂದು ಕಾಣಿಸಿಕೊಂಡು ನಾಪತ್ತೆಯಾದರೆ ಮತ್ತೆ ಅವರನ್ನು ಹುಡುಕಾಡಿದರೂ ಸಿಗಲಾರದ ಮಟ್ಟಕ್ಕೆ ನಾಪತ್ತೆಯಾಗಿದ್ದಾರೆಂದು ಆರೋಪಿಸಿದರು.

ಜಿಲ್ಲೆಯಲ್ಲಿ ರೈತರು ಹಾಗೂ ಅರಣ್ಯ ಅಧಿಕಾರಿಗಳ ಮಧ್ಯೆ ಹಗ್ಗಜಗ್ಗಾಟ ನಿರಂತರವಾಗಿ ನಡೆಯುತ್ತಿದೆ. ಜೊತೆಗೆ ಉಪ ಲೋಕಾಯುಕ್ತರು ಭೇಟಿ ನೀಡಿದಾಗ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ದರ್ಶನವವಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಿ ಬಡವರ ಬದುಕನ್ನು ಬೀದಿಗೆ ತಳ್ಳುತ್ತಿದ್ದಾರೆ. ನಕಲಿ ಬಿತ್ತನೆ ಬೀಜ ಕೀಟನಾಶಕಗಳವರು ಜಿಲ್ಲೆಯಲ್ಲಿ ಆರ್ಭಟ ಮಾಡುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಇದರ ಕಡೆ ಗಮನ ಹರಿಸದೇ ಇರುವುದು ದುರಾದೃಷ್ಟಕರವೆಂದು ವಿಷಾಧ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ರೈತರ ಬೆಳೆ ನಷ್ಟವಾಗುತ್ತಿದೆ. ಮತ್ತೊಂದೆಡೆ ಕೆಸಿವ್ಯಾಲಿ ೩ನೇ ಹಂತದ ಶುದ್ಧೀಕರಣವಿಲ್ಲದೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಂತಹ ಟೊಮೇಟೊ ಮತ್ತಿತರರ ಬೆಳೆಗಳಿಗೆ ಬಾಧಿಸುತ್ತಿರುವ ರೋಗಗಳು ನಿಯಂತ್ರಣಕ್ಕೆ ಬಾರದೆ ಹಾಕಿದ ಬಂಡವಾಳ ಕೈಗೆ ಸಿಗದೆ ರೈತ ಸಾಲಗಾರನಾಗುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಜೊತೆಗೆ ಟೊಮೇಟೊ ಮಾರುಕಟ್ಟೆ ಜಾಗದ ಸಮಸ್ಯೆ ಡಿಸಿಸಿ ಬ್ಯಾಂಕ್ ಹಾಲು ಒಕ್ಕೂಟದ ನೂರಾರು ಕೋಟಿ ಭ್ರಷ್ಟಾಚಾರ ಆರೋಪಗಳನ್ನು ಅವರ ಪಕ್ಷದ ಶಾಸಕರೇ ಬೀದಿ ಜಗಳವಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಪ್ರತಿ ೫ ವರ್ಷಕ್ಕೊಮ್ಮೆ ಜನಪ್ರತಿನಿಧಿಗಳು ಬದಲಾಗುತ್ತಾರೆ. ೨ ವರ್ಷಕ್ಕೊಮ್ಮೆ ಜಿಲ್ಲಾಧಿಕಾರಿಗಳು ಒಳಗೊಂಡಂತೆ ಹಿರಿಯ ಅಧಿಕಾರಿಗಳು ಬದಲಾಗುತ್ತಾರೆಯೇ ಹೊರತು ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಜಿಲ್ಲಾಡಳಿತ ಉಸ್ತುವಾರಿ ಸಚಿವರು ವಿಫಲವಾಗಿದ್ದಾರೆ.
ಪ್ರತಿ ಸರ್ಕಾರಿ ಕಚೇರಿಯಲ್ಲಿ ಲಂಚವಿಲ್ಲದೆ ಬಡವನ ನೆರಳೂ ಸಹ ಸರ್ಕಾರಿ ಕಚೇರಿಯ ಬಾಗಿಲಿಗೂ ಬೀಳುವಂತಿಲ್ಲ. ಅಷ್ಟರ ಮಟ್ಟಿಗೆ ಜಿಲ್ಲಾಡಳಿತ ಹದಗೆಟ್ಟಿರುವ ಜೊತೆಗೆ ಹೆಜ್ಜೆಹೆಜ್ಜೆಗೂ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿ ಮಿತಿ ಮೀರಿದೆ. ಕನಿಷ್ಟ ಸೌಜನ್ಯಕ್ಕಾದರೂ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಸಮಸ್ಯೆಗಳ ಬಗ್ಗೆ ಸಭೆ ಕರೆಯಲು ಪುರಸೊತ್ತಿಲ್ಲ. ಅತ್ತೆ ಮನೆಗೆ ಅಳಿಯ ಬಂದ ಹಾಗೆ ಕೆಡಿಪಿ ಸಭೆಗಳಿಗೆ ಬಂದು ಅಧಿಕಾರಿಗಳ ಮೇಲೆ ಪ್ರತಾಪ ತೋರಿ ನಾಪತ್ತೆಯಾಗುವ ಜಿಲ್ಲೆಯ ನಾಡಿ ಮಿಡಿತವಿಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಪುಣ್ಯ ಕಟ್ಟಿಕೊಂಡು ಜಿಲ್ಲೆಯ ನಾಲ್ಕು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ್ನಹಳ್ಳಿ ಅಂಜಿನಪ್ಪ, ಅಪ್ಪೋಜಿರಾವ್, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ನರಸಿಂಹಪ್ಪ, ಸುಪ್ರಿಂ ಚಲ, ಚಂದ್ರಪ್ಪ, ಶೈಲಜ, ಗೌರಮ್ಮ, ರತ್ನಮ್ಮ, ವೆಂಕಟಮ್ಮ, ಮುನಿರತ್ನಮ್ಮ, ಶಾರದಮ್ಮ, ಮುಂತಾದವರು ಇದ್ದರು.

Ramesh Babu

Journalist

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

7 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

11 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

12 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

13 hours ago