ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನೆ ಮಾಡಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದು ಹೇಳಿದರು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ ಎಂದರು.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…