Categories: ಬೀದರ್

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನೆ ಮಾಡಿದರು.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

16 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

21 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago