ಕೋಲಾರ: ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ ರವಿ ಅವರ ಮೇಲೆ ಬೆಳಗಾವಿಯ ಸುವರ್ಣಸೌಧ ಅಧಿವೇಶನದ ಸಂದರ್ಭದಲ್ಲಿ ನಡೆದಿರುವ ಹಲ್ಲೆಯು ಖಂಡನೀಯವಾಗಿದ್ದು ಕೂಡಲೇ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಂಎಲ್ಸಿ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು ಅದು ಬಿಟ್ಟು ಏಕಾಏಕಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೂಂಡಾಗಳ ರೀತಿಯಲ್ಲಿ ಹಲ್ಲೆಗೆ ಮುಂದಾಗಿದ್ದಾರೆ ಬೆಳಗಾವಿಯ ಸುವರ್ಣಸೌಧದ ಒಳಗೆ ಈ ರೀತಿಯಲ್ಲಿ ಒಬ್ಬ ಜನಪ್ರತಿನಿಧಿಯ ಮೇಲೆ ಹಲ್ಲೆ ನಡೆಯುತ್ತದೆ ಎಂದರೆ ಸಾಮಾನ್ಯ ಜನರು ನಿರೀಕ್ಷಿಸುವಂತಿಲ್ಲ ಪ್ರತಿ ಹಂತದಲ್ಲೂ ಭಯದ ವಾತಾವರಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರವು ಸೃಷ್ಟಿಸಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬಂದ ನಂತರದಲ್ಲಿ ಪೊಲೀಸ್ ವ್ಯವಸ್ಥೆಯು ಹದಗೆಟ್ಟಿದೆ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಕಾಂಗ್ರೆಸ್ ಸರ್ಕಾರವು ಯಾವುದೇ ಶಿಕ್ಷೆ ವಿಧಿಸಲಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಅಪರಾಧಿಗಳನ್ನು ಯಾವುದೇ ಷರತ್ತು ಇಲ್ಲದೆ ಬಿಡುಗಡೆ ಮಾಡಿದೆ ಆದರೆ ಸಿ.ಟಿ.ರವಿ ಅವರು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದರೂ ಯಾವುದೇ ತನಿಖೆ ಮಾಡದೇ ಕಾಂಗ್ರೆಸ್ ಗೂಂಡಾಗಳೊಂದಿಗೆ ಸರಕಾರವು ಕೂ ಶಾಮೀಲು ಆಗಿದೆ ಇಂತಹ ಘಟನೆಗಳು ನಡೆದಿವೆ ಎಂದು ಕೊಮ್ಮನಹಳ್ಳಿ ಆನಂದ್ ಖಂಡನೀಯ ವ್ಯಕ್ತಪಡಿಸಿದರು.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…