ಕೋಲಾರ: ಮುಂದಿನ ಜೂನ್ ತಿಂಗಳಿನಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಅವರಿಗೆ ಅವಕಾಶ ನೀಡಬೇಕು ಒಂದು ವೇಳೆ ಕಿರಿಯರನ್ನು ಪರಿಗಣಿಸುವುದಾದರೆ ನನ್ನನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಕೆ.ಹೆಚ್ ಮುನಿಯಪ್ಪ ಅವರೊಂದಿಗೆ ಭೇಟಿ ಮಾಡಿ ಮನವಿ ಮಾಡಿದರು.
ಮಾಜಿ ಸಚಿವ ಕೆ.ಶ್ರೀನಿವಾಸಗೌಡರು ಕೋಲಾರ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಲು ಸಾಕಷ್ಟು ಶ್ರಮವನ್ನು ವಹಿಸಿದ್ದಾರೆ. ತಮ್ಮ ಇಫ್ಕೋ ಸಂಸ್ಥೆಯ ವತಿಯಿಂದ ರೈತರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದು, ಜನಪರವಾದ ಕಾಳಜಿಯುಳ್ಳ ನಾಯಕರಾಗಿದ್ದಾರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡುವುದು ಅಗತ್ಯವಾಗಿದೆ. ರೈತರ ಪರ ಹೋರಾಟಗಳ ಮೂಲಕವೇ ತಾಲೂಕು ಪಂಚಾಯಿತಿಯಿಂದ ಸಚಿವ ಸ್ಥಾನದವರೆಗೂ ಅವರ ಪರಿಶ್ರಮದಿಂದ ಬೆಳೆದು ಬಂದು ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಕಳೆದ ಬಾರಿ ಸಿಎಂ ಆಗುವ ಅವಕಾಶ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಕೋಲಾರ ಕ್ಷೇತ್ರವನ್ನು ನಿಮಗೆ ಬಿಟ್ಟು ಕೊಟ್ಟಿದ್ದರು. ಕೊನೆ ಗಳಿಗೆಯಲ್ಲಿ ನೀವು ಸ್ಪರ್ಧೆ ಮಾಡಲಿಲ್ಲ ಬೇರೆಯವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ ಅದರಿಂದಲೇ ಶ್ರೀನಿವಾಸಗೌಡರಿಗೆ ಒಂದು ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟರು
ಒಂದು ವೇಳೆ ಕಾಂಗ್ರೆಸ್ ಪಕ್ಷವು ಕಿರಿತನದ ಆಧಾರದಲ್ಲಿ ಅವಕಾಶ ನೀಡುವುದಾದರೆ ಕೋಲಾರ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿ ಜಿಲ್ಲೆಯಲ್ಲಿ ಸಮರ್ಥವಾಗಿ ಪಕ್ಷವನ್ನು ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ಇದರಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕಾಂಗ್ರೆಸ್ ಶಾಸಕ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ. ನಾನು ಕೂಡ ಮೂರು ಬಾರಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಆಕಾಂಕ್ಷೆ ಯಾಗಿದ್ದ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕೆಎಚ್ ಮುನಿಯಪ್ಪ ಏಳು ಬಾರಿ ಗೆಲುವು ಸಾಧಿಸಲು ಪ್ರಮುಖವಾಗಿ ಪಾತ್ರವನ್ನು ವಹಿಸಿದ್ದೇನೆ. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷನಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ, ನಗರಸಭೆ ಅಧ್ಯಕ್ಷನಾಗಿ ಕೆಲಸ ಮಾಡಿದ್ದು, ನನ್ನ ಸೇವಾ ಹಿರಿತನವನ್ನು ಪರಿಗಣಿಸಿ ಮುಂದೆ ನಡೆಯುವ ಎಂಎಲ್ಸಿ ಸ್ಥಾನಗಳಿಗೆ ನನ್ನನ್ನು ಪರಿಗಣಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ