Categories: ಕೋಲಾರ

ಎಂಎಲ್ ಸಿ ಸ್ಥಾನಕ್ಕೆ ನನ್ನ ಸೇವಾ ಹಿರಿತನವನ್ನು ಪರಿಗಣಿಸುವಂತೆ ಸಿಎಂಗೆ ಮನವಿ ಮಾಡಿದ ಊರಬಾಗಿಲು ಶ್ರೀನಿವಾಸ್

ಕೋಲಾರ: ಮುಂದಿನ ಜೂನ್ ತಿಂಗಳಿನಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಅವರಿಗೆ ಅವಕಾಶ ನೀಡಬೇಕು ಒಂದು ವೇಳೆ ಕಿರಿಯರನ್ನು ಪರಿಗಣಿಸುವುದಾದರೆ ನನ್ನನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಕೆ.ಹೆಚ್ ಮುನಿಯಪ್ಪ ಅವರೊಂದಿಗೆ ಭೇಟಿ ಮಾಡಿ ಮನವಿ ಮಾಡಿದರು.

ಮಾಜಿ ಸಚಿವ ಕೆ.ಶ್ರೀನಿವಾಸಗೌಡರು ಕೋಲಾರ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಲು ಸಾಕಷ್ಟು ಶ್ರಮವನ್ನು ವಹಿಸಿದ್ದಾರೆ. ತಮ್ಮ ಇಫ್ಕೋ ಸಂಸ್ಥೆಯ ವತಿಯಿಂದ ರೈತರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಿದ್ದು, ಜನಪರವಾದ ಕಾಳಜಿಯುಳ್ಳ ನಾಯಕರಾಗಿದ್ದಾರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡುವುದು ಅಗತ್ಯವಾಗಿದೆ. ರೈತರ ಪರ ಹೋರಾಟಗಳ ಮೂಲಕವೇ ತಾಲೂಕು ಪಂಚಾಯಿತಿಯಿಂದ ಸಚಿವ ಸ್ಥಾನದವರೆಗೂ ಅವರ ಪರಿಶ್ರಮದಿಂದ ಬೆಳೆದು ಬಂದು ಸಹಕಾರಿ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಕಳೆದ ಬಾರಿ ಸಿಎಂ ಆಗುವ ಅವಕಾಶ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಕೋಲಾರ ಕ್ಷೇತ್ರವನ್ನು ನಿಮಗೆ ಬಿಟ್ಟು ಕೊಟ್ಟಿದ್ದರು‌. ಕೊನೆ ಗಳಿಗೆಯಲ್ಲಿ ನೀವು ಸ್ಪರ್ಧೆ ಮಾಡಲಿಲ್ಲ ಬೇರೆಯವರಿಗೆ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ ಅದರಿಂದಲೇ ಶ್ರೀನಿವಾಸಗೌಡರಿಗೆ ಒಂದು ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟರು

ಒಂದು ವೇಳೆ ಕಾಂಗ್ರೆಸ್ ಪಕ್ಷವು ಕಿರಿತನದ ಆಧಾರದಲ್ಲಿ ಅವಕಾಶ ನೀಡುವುದಾದರೆ ಕೋಲಾರ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿ ಜಿಲ್ಲೆಯಲ್ಲಿ ಸಮರ್ಥವಾಗಿ ಪಕ್ಷವನ್ನು ಸಂಘಟನೆ ಮಾಡಿಕೊಂಡು ಬಂದಿದ್ದೇನೆ. ಇದರಿಂದಾಗಿ ಜಿಲ್ಲೆಯಲ್ಲಿ ಹೆಚ್ಚಿನ ಕಾಂಗ್ರೆಸ್ ಶಾಸಕ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ. ನಾನು ಕೂಡ ಮೂರು ಬಾರಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಆಕಾಂಕ್ಷೆ ಯಾಗಿದ್ದ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕೆ‌ಎಚ್ ಮುನಿಯಪ್ಪ ಏಳು ಬಾರಿ ಗೆಲುವು ಸಾಧಿಸಲು ಪ್ರಮುಖವಾಗಿ ಪಾತ್ರವನ್ನು ವಹಿಸಿದ್ದೇನೆ. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷನಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ, ನಗರಸಭೆ ಅಧ್ಯಕ್ಷನಾಗಿ ಕೆಲಸ ಮಾಡಿದ್ದು, ನನ್ನ ಸೇವಾ ಹಿರಿತನವನ್ನು ಪರಿಗಣಿಸಿ ಮುಂದೆ ನಡೆಯುವ ಎಂಎಲ್ಸಿ ಸ್ಥಾನಗಳಿಗೆ ನನ್ನನ್ನು ಪರಿಗಣಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

9 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

11 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

13 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

18 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

21 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago