ಕೋಲಾರ: ತಾಲ್ಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಬಳಿ ನೂತನವಾಗಿ ಪ್ರಾರಂಭವಾಗಿರುವ ಎಂಎಸ್ಐಎಲ್ ಮದ್ಯ ಮಾರಾಟದ ಮಳಿಗೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಬುಧವಾರ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ನೇತೃತ್ವದಲ್ಲಿ ಗ್ರಾಮದಿಂದ ಮೆರವಣಿಗೆ ಮೂಲಕ ಹೋಗಿ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಭಾರತೀಯ ದಲಿತ ಸೇನೆ ರಾಜ್ಯ ಅಧ್ಯಕ್ಷ ದಲಿತ್ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಪ್ರಾರಂಭ ಮಾಡಿ ಜನತೆಯನ್ನು ಕುಡುಕರನ್ನಾಗಿ ಮಾಡುತ್ತಿದೆಯೆಂದು ದೂರಿದರು.
ಕಳೆದ ಆರು ತಿಂಗಳ ಹಿಂದೆ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಪ್ರಾರಂಭ ಮಾಡಿದಾಗಲೂ ಗಲಾಟೆ ಹಾಗೂ ಪ್ರತಿಭಟನೆ ಮಾಡಿ ಮುಚ್ಚಿಸಿದ್ದು ಮತ್ತೆ ಪ್ರಾರಂಭ ಮಾಡಿರುವುದು ಖಂಡನೀಯ, ಈ ರಸ್ತೆಯಲ್ಲಿ ಕೆಲಸಕ್ಕೆ ಹೋಗುವ ಹೆಣ್ಣುಮಕ್ಕಳು, ಗೃಹಣಿಯರು ಹಾಗೂ ವಿದ್ಯಾರ್ಥಿಗಳು ಸಂಚಾರ ಮಾಡುತ್ತಾರೆ ಈ ರಸ್ತೆಯಲ್ಲಿ ಮದ್ಯದ ಮಳಿಗೆ ಪ್ರಾರಂಭ ಮಾಡಿದರೆ ತೊಂದರೆ ಆಗುತ್ತದೆಯೆಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಅಬಕಾರಿ ಡಿವೈಎಸ್ಪಿ ಶ್ರೀಶೈಲ ಅವಜಿ ಹಾಗೂ ಎಂಎಸ್ಐಎಲ್ ಜಿಲ್ಲಾ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರ ಅಹವಾಲು ಕೇಳಿಸಿಕೊಂಡು ಮಾತನಾಡಿದ ಅವರು, ಕಾನೂನು ಬದ್ಧವಾಗಿ ಮದ್ಯ ಮಾರಾಟಕ್ಕೆ ಎಂಎಸ್ಐಎಲ್ ಗೆ ಪರವಾನಗಿ ನೀಡಿದ್ದು, ಜನರ ವಿರೋಧದ ವರದಿಯನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.
ಅಂಗಡಿ ಮಾಲೀಕರು ಇನ್ನು ಒಂದು ತಿಂಗಳ ಒಳಗೆ ರಸ್ತೆಯ ಬದಿಯಲ್ಲಿರುವ ಅಂಗಡಿಯನ್ನು ರಸ್ತೆಯಿಂದ ದೂರದಲ್ಲಿ ಕಟ್ಟಿ ಬದಲಿಸುವ ಭರವಸೆ ನೀಡಿರುವುದಾಗಿ ತಿಳಿಸಿದರು. ಇದಕ್ಕೆ ಒಪ್ಪದ ಪ್ರತಿಭಟನೆಕಾರರು ಸ್ಥಳದಲ್ಲಿ ಪೆಂಡಾಲ್ ಹಾಕಿ ಧರಣಿ ಮುಂದುವರೆಸಿದ್ದು, ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಮುಚ್ಚುವವರೆಗೆ ಹೋರಾಟ ಮುಂದುವರೆಸುವುದಾಗಿ ಪಟ್ಟು ಹಿಡಿದು ಧರಣಿ ಮಾಡಿದರು.
ಮತ್ತೊಂದು ತಂಡ ಸ್ಥಳದಲ್ಲಿಯೇ ಎಂಎಸ್ಐಎಲ್ ಮಳಿಗೆಯನ್ನು ಪ್ರಾರಂಭ ಮಾಡಬೇಕು ಎಂದು ಕೆಲವರು ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯ ನೇತೃತ್ವವನ್ನು ಬೆಗ್ಲಿ ಹೊಸಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚರಣ್, ದಲಿತ ಸಂಘಟನೆಗಳ ಮುಖಂಡರಾದ ಯುವಶಕ್ತಿ ಸುಬ್ಬು, ಮತ್ತಿಕುಂಟೆ ಕೃಷ್ಣ, ಹೂವಳ್ಳಿ ಪ್ರಕಾಶ್ ಎಂ.ಆರ್ ಚೇತನ್ ಬಾಬು ಸೇರಿದಂತೆ ಗ್ರಾಮದ ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನೇತೃತ್ವವನ್ನು ವಹಿಸಿದ್ದರು.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…