ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು ಬರುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಧೀರಜ್ ಮುನಿರಾಜು ಕಸದ ಘಟಕದ ಬಳಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರ ಜೊತೆಗೆ ಕಸವನ್ನು ಡಂಪ್ ಮಾಡಲು ಬಂದಿದ್ದ ಹೆಚ್ಚುವರಿ ಲಾರಿಗಳನ್ನು ತಡೆದು ವಾಪಸ್ ಕಳಿಸಿರು ಘಟನೆ ನಡೆದಿದೆ.
ಬೆಂಗಳೂರಿನ ಮಹದೇವಪುರ ಮತ್ತು ಮೀಟಗಾನಹಳ್ಳಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಲ್ಲಿನ ಕಸದ ಲಾರಿಗಳು ತಾಲ್ಲೂಕಿನ ಎಂ ಎಸ್ ಜಿ ಪಿ ಘಟಕದಲ್ಲಿ ವಿಲೇವಾರಿ ಮಾಡಲು ಬಂದಿದ್ದವು. ವಿಷಯ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕ ಧೀರಜ್ ಮುನಿರಾಜುಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಲಾರಿಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಆರ್.ಟಿ.ಓ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ತೆರಿಗೆ ಪಾವತಿ ಮಾಡದ ಲಾರಿಗಳನ್ನ ಜಪ್ತಿ, ಎಫ್.ಸಿ, ಇನ್ಸೂರೆನ್ಸ್ ಇಲ್ಲದ ವಾಹನಗಳಿಗೆ ದಂಡ ವಿಧಿಸುವಂತೆ ಸೂಚಿಸಿದರು.
ಬಳಿಕ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ಕಸ ವಿಲೇವಾರಿ ಘಟಕವಾದ ಎಂ.ಎಸ್ ಜಿ.ಪಿ ಘಟಕದ ವಿರುದ್ಧ ಸತತವಾಗಿ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದೇನೆ. ಹೈಕೋರ್ಟ್ ಕೂಡ ಸಕಾರತ್ಮಕವಾಗಿ ಸ್ಪಂದಿಸಿದ್ದು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದೆ. ಜಿಲ್ಲಾ ನ್ಯಾಯಾಧೀಶರು ಎರಡು ಬಾರಿ ಭೇಟಿ ನೀಡಿ ತನಿಖೆ ಮಾಡಿದ್ದಾರೆ. ಇದಲ್ಲದೆ ಐಐಎಸ್ಸಿ ನೇತೃತ್ವದಲ್ಲಿ ತನಿಖೆಯಾಗಬೇಕಿದೆ ಎಂದು ಒತ್ತಾಯಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮವಹಿಸದ ಕಾರಣ
ಕಾನೂನು ಹೋರಾಟ ಮಾಡುತ್ತಿದ್ದೇನೆ. ತಾರ್ಕಿಕ ಅಂತ್ಯ ಸಿಗುವವರೆಗೂ ಹೋರಾಟ ಮಾಡುತ್ತೇನೆ. ಅಲ್ಲದೆ ಅಧಿಕಾರಿಗಳು, ಸಿಎಂ, ಡಿಸಿಎಂಗೂ ಈ ಘಟಕ ಮುಚ್ಚುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ಇದ್ದಿದ್ದರೆ ನಾನೇ ಮಂತ್ರಿಗಳಿಗೆ ಹೇಳಿ ಸ್ಥಗಿತಗೊಳಿಸುತ್ತಿದ್ದೆ. ಹೋರಾಟದ ಕೊನೆಯ ಭಾಗವಾಗಿ ಬೀದಿಗಿಳಿದು ಜನರೊಂದಿಗೆ ಹೋರಾಟ ಮಾಡಲಾಗುವುದು. ಇಂದು ನಾನು ಸ್ಥಳಕ್ಕೆ ಬಾರದೆ ಹೋಗಿದ್ದರೆ ಸುಮಾರು ೪೦೦ಕ್ಕೂ ಹೆಚ್ಚು ಲಾರಿಗಳು ಇಲ್ಲಿನ ಘಟಕಕ್ಕೆ ಕಸವನ್ನ ಡಂಪ್ ಮಾಡುತ್ತಿದ್ದವು ಎಂದು ತಿಳಿಸಿದರು.
ಈ ವೇಳೆ ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ನವೀನ್, ಮುಖಂಡರಾದ ಸಿದ್ದಲಿಂಗಯ್ಯ, ಚನ್ನೇಗೌಡ, ಗ್ರಾಮಸ್ಥರು ಇದ್ದರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…