ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ತಿಂಗಳಿರುವಾಗಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪ್ರಬಲ ನಾಯಕರು ತಮ್ಮ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರ ಮೂಲಕ ಪರೋಕ್ಷವಾಗಿ ಕಸರತ್ತು ನಡೆಸುತ್ತಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಎಂಟಿಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಈ ಕುರಿತು ನಗರದ ಜೆ.ಸಿ.ಎನ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ‘ಸಭ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಘೋಷ ವಾಕ್ಯದಂತೆ ಹಿಂದುಳಿದ ವರ್ಗದ ಕುರುಬ ಸಮಾಜಕ್ಕೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ನೀಡಬೇಕೆಂಬುದು ನಮ್ಮ ಸಮುದಾಯ ಒತ್ತಾಯಿಸುತ್ತದೆ ಎಂದರು.
ಪ್ರಸ್ತುತ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಮಾರು 2ಲಕ್ಷಕ್ಕೂ ಅಧಿಕ ಮತದಾರರನ್ನು ಹೊಂದಿದ್ದು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾಗಿ ಅಭಿವೃದ್ಧಿ ಕೆಲಸಗಳುನ್ನ ಮಾಡಿ ಹೆಚ್ಚು ಜನಮನ್ನಣೆಗಳಿಸಿರುವ ಎಂಟಿಬಿ ನಾಗರಾಜ್ ಅವರಿಗೆ ಈ ಬಾರಿ ಬಿಜೆಪಿಯಿಂದ ಲೋಕಸಭೆ ಟಿಕೆಟ್ ನೀಡಿದರೆ ಬಿಜೆಪಿ ಗೆಲುವು ಬಹುತೇಕ ಖಚಿತವಾಗಲಿದೆ ಎಂದು ತಿಳಿಸಿದರು.
ಬಿಜೆಪಿ ಪಕ್ಷದ ಹಿಂದಿನ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿ ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿದರೆ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖಂಡರು, ಎಂಟಿಬಿ ನಾಗರಾಜ್ ಅವರು ಸಿದ್ದರಾಮಯ್ಯರ ಆಪ್ತರು ಆದರೂ ಬಿಜೆಪಿ ಪಕ್ಷಕ್ಕೆ ನಿಷ್ಟವಂತರಾಗಿದ್ದಾರೆ, ಈಗಾಗಲೇ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಾರಣ ಕಾಂಗ್ರೆಸ್ ನಿಂದ ಸ್ಪರ್ಧೆಯ ಮಾತಿಲ್ಲವೆಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಕೇಶವ ಮೂರ್ತಿ ಹೊಸಕೋಟೆ, ತಾಲೂಕು ಬಿಜೆಪಿ ಒಬಿಸಿ ಅಧ್ಯಕ್ಷ ಆಲಳ್ಳಿ ಚಂದ್ರಶೇಖರ್, ಕನಕ ಕೋ.. ಅಪರೇಟಿವ್ ಸೊಸೈಟಿ ಅಧ್ಯಕ್ಷ ಲೋಕೇಶ್, ಗ್ರಾಪಂ ಸದಸ್ಯ ನಾಗರಾಜ್, ಮುಖಂಡರಾದ ಮಂಜುನಾಥ್, ಎಲ್ಲಪ್ಪ, ಚೌಡರಾಜ್, ಕೆಂಪರಾಜು, ಲಕ್ಷ್ಮೀಷ, ಬೀರೇಶ್, ಮುನಿ ಬೀರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…