ಎಂಟಿಬಿ ನಾಗರಾಜ್ ಅವರಿಗೆ ಲೋಕಸಭಾ ಟಿಕೆಟ್ ನೀಡುವಂತೆ ಒತ್ತಾಯ

ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ತಿಂಗಳಿರುವಾಗಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪ್ರಬಲ ನಾಯಕರು ತಮ್ಮ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರ ಮೂಲಕ ಪರೋಕ್ಷವಾಗಿ ಕಸರತ್ತು ನಡೆಸುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಎಂಟಿಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಈ ಕುರಿತು ನಗರದ  ಜೆ.ಸಿ.ಎನ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ‘ಸಭ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಘೋಷ ವಾಕ್ಯದಂತೆ ಹಿಂದುಳಿದ ವರ್ಗದ ಕುರುಬ ಸಮಾಜಕ್ಕೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ನೀಡಬೇಕೆಂಬುದು ನಮ್ಮ ಸಮುದಾಯ ಒತ್ತಾಯಿಸುತ್ತದೆ ಎಂದರು.

ಪ್ರಸ್ತುತ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಮಾರು 2ಲಕ್ಷಕ್ಕೂ ಅಧಿಕ ಮತದಾರರನ್ನು ಹೊಂದಿದ್ದು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾಗಿ ಅಭಿವೃದ್ಧಿ ಕೆಲಸಗಳುನ್ನ ಮಾಡಿ ಹೆಚ್ಚು ಜನಮನ್ನಣೆಗಳಿಸಿರುವ ಎಂಟಿಬಿ ನಾಗರಾಜ್ ಅವರಿಗೆ ಈ ಬಾರಿ ಬಿಜೆಪಿಯಿಂದ ಲೋಕಸಭೆ ಟಿಕೆಟ್ ನೀಡಿದರೆ ಬಿಜೆಪಿ ಗೆಲುವು ಬಹುತೇಕ ಖಚಿತವಾಗಲಿದೆ ಎಂದು ತಿಳಿಸಿದರು.

ಬಿಜೆಪಿ ಪಕ್ಷದ ಹಿಂದಿನ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿ ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿದರೆ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಸಾಧ್ಯತೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖಂಡರು, ಎಂಟಿಬಿ ನಾಗರಾಜ್ ಅವರು ಸಿದ್ದರಾಮಯ್ಯರ ಆಪ್ತರು ಆದರೂ  ಬಿಜೆಪಿ ಪಕ್ಷಕ್ಕೆ ನಿಷ್ಟವಂತರಾಗಿದ್ದಾರೆ, ಈಗಾಗಲೇ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಾರಣ ಕಾಂಗ್ರೆಸ್ ನಿಂದ ಸ್ಪರ್ಧೆಯ ಮಾತಿಲ್ಲವೆಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಕೇಶವ ಮೂರ್ತಿ ಹೊಸಕೋಟೆ, ತಾಲೂಕು ಬಿಜೆಪಿ ಒಬಿಸಿ ಅಧ್ಯಕ್ಷ ಆಲಳ್ಳಿ ಚಂದ್ರಶೇಖರ್, ಕನಕ ಕೋ.. ಅಪರೇಟಿವ್ ಸೊಸೈಟಿ ಅಧ್ಯಕ್ಷ ಲೋಕೇಶ್, ಗ್ರಾಪಂ‌ ಸದಸ್ಯ ನಾಗರಾಜ್, ಮುಖಂಡರಾದ ಮಂಜುನಾಥ್, ಎಲ್ಲಪ್ಪ, ಚೌಡರಾಜ್, ಕೆಂಪರಾಜು, ಲಕ್ಷ್ಮೀಷ, ಬೀರೇಶ್, ಮುನಿ ಬೀರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago