ಎಂಪಿ ಚುನಾವಣಾ ತಯಾರಿ ಸಭೆ: ರಾಜ್ಯದಲ್ಲಿ 20-24 ಸ್ಥಾನಗಳು ಗೆಲ್ಲುವ ಗುರಿ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯ ತಯಾರಿ ಮತ್ತು ಕಾರ್ಯತಂತ್ರದ ಕುರಿತು ಕರ್ನಾಟಕ ಕಾಂಗ್ರೆಸ್ ನಾಯಕರೊಂದಿಗೆ ಸಂವಾದ ನಡೆಸಲಾಯಿತು. ಎಲ್ಲಾ ವರ್ಗದ ಜನರ ಪ್ರಗತಿಯನ್ನು ಗುರಿಯಾಗಿಟ್ಟುಕೊಂಡು ಚರ್ಚೆಗಳು ನಡೆಯಿತು.

ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳ ಜಾರಿಯ “ಕರ್ನಾಟಕ ಅಭಿವೃದ್ಧಿ ಮಾದರಿ” ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ.
ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರುಗಳು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.

ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

5 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

6 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

8 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

16 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

18 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago