ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾಧ್ಯಂತ ಒಟ್ಟು 248 ಪೊಲೀಸ್ ಇನ್ ಸ್ಪೆಕ್ಟರ್ ಗಳು- 34 ಡಿವೈಎಸ್ ಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶಗೌಡ ಅವರನ್ನು ತುಮಕೂರು ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಚುನಾವಣಾ ಸಂಬಂಧ ಪೊಲೀಸ್ ಸಿಬ್ಬಂದಿ ಮಂಡಳಿ ನಡೆಸಿದ ಸಭೆಯ ನಿರ್ಣಯದಂತೆ ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಡಿಜಿ ಮತ್ತು ಐಜಿಪಿ ಸೌಮೆಂದು ಮುಖರ್ಜಿ ಆದೇಶದಲ್ಲಿ ತಿಳಿಸಿದ್ದಾರೆ.