ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 05 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380220884, 9380162041, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…