ಎಂಬ್ರಾಯ್ಡರಿ (ಆರಿ ವರ್ಕ್) & ಫ್ಯಾಬ್ರಿಕ್‌ ಪೇಟಿಂಗ್ ಕುರಿತ ಉಚಿತ ತರಬೇತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ (ಆರಿ ವರ್ಕ್) & ಫ್ಯಾಬ್ರಿಕ್‌ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 15 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಮೇ 08 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9380162042, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಕಮಿಷನರ್ ಕುರ್ಚಿಯಲ್ಲಿ ಹಿತೇಂದ್ರ: ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ ಸ್ವೀಕಾರ

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರು ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ…

3 hours ago

ಕೇಂದ್ರದ ಅನುದಾನದ ಬಳಿಕ ಹೆಚ್ಚುವರಿ ಬರ ಪರಿಹಾರ; ಕೃಷಿ ಸಚಿವ ನರೇಂದ್ರ ಸ್ವಾಮಿ ಭರವಸೆ

ರಾಜ್ಯದ ರೈತರಿಗೆ 5 ಸಾವಿರ ರೂ. ಬರ ಪರಿಹಾರ ನೀಡಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದ ತಕ್ಷಣ ಹೆಚ್ಚುವರಿ ಪರಿಹಾರವನ್ನು…

3 hours ago

ಹಳ್ಳಿ ಹಳ್ಳಿಗೂ ನೇಗಿಲ ಯೋಗಿ ಯೋಜನೆ ತಲುಪಿಸಲು ಅಧಿಕಾರಿಗಳಿಗೆ ಕೃಷಿ ಸಚಿವ ಸೂಚನೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ನೇಗಿಲ ಯೋಗಿ ಯೋಜನೆಗೆ ಚಾಮರಾಜನಗರ, ಗುಂಡ್ಲುಪೇಟೆ ಆಯ್ಕೆಯಾಗಿದ್ದು, ಮುಂಗಾರಿಗೂ ಮೊದಲೇ ರೈತರಿಗೆ ಯೋಜನೆ ಕುರಿತು ವ್ಯಾಪಕ…

3 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 2 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿಎ ಸಿಬ್ಬಂದಿ

ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡುವ ನೆಪದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಎಸ್‌ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ…

17 hours ago

ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಸಾಮಾನ್ಯ ಕನ್ನಡ ಪತ್ರಿಕೆ ಮರುಸೇರ್ಪಡೆಗೆ ಕನ್ನಡ ಪಕ್ಷ ಒತ್ತಾಯ

  ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…

1 day ago

ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಬೆಳೆಸಿಕೊಳ್ಳುವುದು ಅಗತ್ಯ: ಡಾ. ವೆಂಕಟೇಶ್ ರೆಡ್ಡಿ

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…

1 day ago