ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ ಹಾಗೂ ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 05 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಹೆಸರು ನೋಂದಾಯಿಸಲು ಅಕ್ಟೋಬರ್ 08 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…