ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ (ಜೆ.ಆರ್.ಎಫ್ ಮಾದರಿ) ಪೂರ್ಣ ಸಮಯದ M.PHIL/PH.D ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಕ್ಟೋಬರ್ 03 ರವರೆಗೆ ದಿನಾಂಕ ನಿಗದಿಪಡಿಸಲಾಗಿತ್ತು.
ಆದರೆ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಹಾಗೂ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸ್ವೀಕರಿಸುವ ಸದುದ್ದೇಶದಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.31ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ). ಕೋರ್ಸ್ ಪೂರ್ಣಕಾಲಿಕ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.8 ಲಕ್ಷಗಳನ್ನು ಮೀರಬಾರದು. ಪಿ.ಹೆಚ್.ಡಿ ಮತ್ತು ಎಂ.ಫಿಲ್ ವ್ಯಾಸಂಗವನ್ನು ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಮಾಡತಕ್ಕದ್ದು.
ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ಮೀರಬಾರದು. ಸರ್ಕಾರಿ ನೌಕರ ಅಭ್ಯರ್ಥಿಗಳು (ಕೇಂದ್ರ/ರಾಜ್ಯ) ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿದಾರರಿಗೆ ಸೂಚನೆಗಳು
ಅರ್ಜಿದಾರರು https://sevasindhu.Karnataka.gov.in/Sevasindhu/Department Service ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಎಂ.ಫಿಲ್ ಅಥವಾ ಪಿ.ಹೆಚ್.ಡಿ ಗಳಲ್ಲಿ ಯಾವುದಾದರೂ ಒಂದು ಕೋರ್ಸ್ ಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ವಿಧಾನಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQs) ಇಲ್ಲಿ ಲಭ್ಯವಿದೆ. https://Dom.Karnataka.gov.in ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ವಿಶ್ವವಿದ್ಯಾಲಯದ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
ಕಚೇರಿ ದೂರವಾಣಿ ಸಂಖ್ಯೆ
1.ಜಿಲ್ಲಾ ಕಚೇರಿ, ದೇವನಹಳ್ಳಿ 080- 29787455,
2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು 9986874875,
3.ತಾಲ್ಲೂಕು ಮಾಹಿತಿ ಕೇಂದ್ರ, ನೆಲಮಂಗಲ ತಾಲ್ಲೂಕು 8660197516,
4.ತಾಲ್ಲೂಕು ಮಾಹಿತಿ ಕೇಂದ್ರ, ದೇವನಹಳ್ಳಿ ತಾಲ್ಲೂಕು 8861926851,
5.ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ ತಾಲ್ಲೂಕು 7676905779,
6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…