ಯುವ ರಾಜ್ಕುಮಾರ್ ಅಭಿನಯದ “ಎಕ್ಕ” ಚಿತ್ರಕ್ಕೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಮಸ್ತ್ ಮಾಸ್ ಮನರಂಜನೆ ನೀಡುವ ಈ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಅಬ್ಬರದ ಗಳಿಕೆ ಮಾಡಿರೋ ಸಿನಿಮಾ ಗೆಲ್ಲುವ ನಿರೀಕ್ಷೆ ಮೂಡಿಸಿದೆ.
Sacnilk ವರದಿ ಮಾಡಿರುವ ಪ್ರಕಾರ, ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆದ ‘ಎಕ್ಕ’ ಸಿನಿಮಾ ಮೊದಲ ದಿನ 1.60 ಕೋಟಿ ರೂಪಾಯಿಯಿಂದ 2 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇಂದು (ಜುಲೈ 19) ಹಾಗೂ ನಾಳೆ (ಜುಲೈ 20) ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆ ಹೊಂದಲಾಗಿದೆ.
ಈ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದಾರೆ. ಕಷ್ಟ ಎಂದು ಹಳ್ಳಿಯಿಂದ ಸಿಟಿಗೆ ಬರೋ ಹುಡುಗನ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್ಕುಮಾರ್, ಕಾರ್ತಿಕ್ ಗೌಡ, ಯೋಗಿ, ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಾಣ ಮಾಡಿದ್ದಾರೆ.
ಕಳೆದ ಆರು ತಿಂಗಳಿಂದ ಕನ್ನಡದಲ್ಲಿ ಅನೇಕ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ಯಾವ ಚಿತ್ರವೂ ಹೆಚ್ಚು ಗಳಿಕೆ ಮಾಡಿರಲಿಲ್ಲ. ಈ ವರ್ಷದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂದರೆ ಶರಣ್ ನಟನೆಯ ‘ಛೂ ಮಂತರ್’ (5 ಕೋಟಿ ರೂಪಾಯಿ) ಸಿನಿಮಾ. ಈಗ ಈ ದಾಖಲೆಯನ್ನು ‘ಎಕ್ಕ’ ಸಿನಿಮಾ ಮುರಿಯುವ ಸೂಚನೆ ಕೊಟ್ಟಿದೆ. ಈ ಸಿನಿಮಾ ಗೆಲವಿಗೆ ತಂಡಕ್ಕೆ ಶುಭ ಕೋರಲಾಗುತ್ತಿದೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…