ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಖಾನೆಯಲ್ಲಿನ ವೇತನ ಒಪ್ಪಂದ ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಕಾರ್ಖಾನೆಯ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು, ಇದಕ್ಕೆ ಸಹಕರಿಸಿದ ಜಿಲ್ಲಾಡಳಿತಕ್ಕೆ ಹಾಗೂ ವಿವಿಧ ಸಂಘಟನೆಗಳಿಗೆ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಧನ್ಯವಾದಗಳನ್ನು ಸಲ್ಲಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತ ಮಂಡಳಿಯು ಸ್ಪಂದಿಸುತ್ತಿಲ್ಲ ಎಂದು ಸುಮಾರು ಎರಡು ತಿಂಗಳು ಕಾಲ ಕಾರ್ಖಾನೆಯ ಎದುರು ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಹಿಂದಿನ ಕೋಲಾರ ಎಸ್ಪಿ ಎಂ.ನಾರಾಯಣ ಮಧ್ಯೆ ಪ್ರವೇಶಿಸಿ ಕಾರ್ಮಿಕರ ಹಿತ ರಕ್ಷಣೆ ಮಾಡುವ ಕೆಲಸವನ್ನು ಮಾಡಿ ಮತ್ತೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು.
ಕೋಲಾರ ಜಿಲ್ಲೆಯಲ್ಲಿ ಸುಮಾರು ವರ್ಷಗಳ ಹೋರಾಟದ ಫಲವಾಗಿ ಇವತ್ತು ಕೈಗಾರಿಕೆಗಳು ಪ್ರಾರಂಭವಾಗಿದ್ದು, ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿಯಾಗಬೇಕು ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಕೇಸ್‌ಗಳನ್ನು ಹಾಕಲು ಕಾರ್ಖಾನೆಯ ಆಡಳಿತ ಮಂಡಳಿಯಿಂದ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಇದ್ದು, ಕಾರ್ಮಿಕರಿಗೆ ಅನುಕೂಲವಾಗಿಲ್ಲ ಯಾವುದೇ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು, ಜೊತೆಗೆ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವುದನ್ನು ಕೈಬಿಡಬೇಕು. ಕಾರ್ಮಿಕರ ರಕ್ಷಣೆಗೆ ನಿಲ್ಲುವಂತೆ ಆಡಳಿತ ಮಂಡಳಿಯು ಮುಂದಾಗುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ವಿ.ಹರೀಶ್ ಮಾತನಾಡಿ, ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇವೆ ಆಡಳಿತ ಮಂಡಳಿಯು ನಿರಾಕರಣೆಯಿಂದ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯದ ಆದೇಶವನ್ನು ಸಹ ಉಲ್ಲಂಘನೆ ಮಾಡಿದ್ದರೂ ಆದರೆ ಜಿಲ್ಲಾಡಳಿತ ಮಧ್ಯೆ ಪ್ರವೇಶದಿಂದ ಕೆಲವು ಬೇಡಿಕೆಗಳನ್ನು ಜಾರಿ ಮಾಡಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಉಳಿದ ಬೇಡಿಕೆಗಳನ್ನು ಕೂಡ ಈಡೇರಿಸಲು ಆಡಳಿತ ಮಂಡಳಿ ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಪ್ರಮೋದ್ ಪೂಜಾರಿ, ಉಪಾಧ್ಯಕ್ಷರಾದ ರಮೇಶ್ ನಿಂಬುಜಿ, ಶರತ್ ಕುಮಾರ್, ಜಂಟಿ ಕಾರ್ಯದರ್ಶಿ ಪೃಥ್ವಿರಾಜ್ ಮುಂತಾದವರು ಇದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…