Categories: ಕೋಲಾರ

ಎಕ್ಷಿಡಿ ಕಾರ್ಖಾನೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಡಳಿತ ಮಂಡಳಿ ಒಪ್ಪಿಗೆ: ಇದಕ್ಕೆ ಸಹಕರಿಸಿದವರಿಗೆ ಧನ್ಯವಾದಗಳನ್ನ ತಿಳಿಸಿದ ಸಿಐಟಿಯು

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಖಾನೆಯಲ್ಲಿನ ವೇತನ ಒಪ್ಪಂದ ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಕಾರ್ಖಾನೆಯ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು, ಇದಕ್ಕೆ ಸಹಕರಿಸಿದ ಜಿಲ್ಲಾಡಳಿತಕ್ಕೆ ಹಾಗೂ ವಿವಿಧ ಸಂಘಟನೆಗಳಿಗೆ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಧನ್ಯವಾದಗಳನ್ನು ಸಲ್ಲಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತ ಮಂಡಳಿಯು ಸ್ಪಂದಿಸುತ್ತಿಲ್ಲ ಎಂದು ಸುಮಾರು ಎರಡು ತಿಂಗಳು ಕಾಲ ಕಾರ್ಖಾನೆಯ ಎದುರು ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಹಿಂದಿನ ಕೋಲಾರ ಎಸ್ಪಿ ಎಂ.ನಾರಾಯಣ ಮಧ್ಯೆ ಪ್ರವೇಶಿಸಿ ಕಾರ್ಮಿಕರ ಹಿತ ರಕ್ಷಣೆ ಮಾಡುವ ಕೆಲಸವನ್ನು ಮಾಡಿ ಮತ್ತೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು.

ಕೋಲಾರ ಜಿಲ್ಲೆಯಲ್ಲಿ ಸುಮಾರು ವರ್ಷಗಳ ಹೋರಾಟದ ಫಲವಾಗಿ ಇವತ್ತು ಕೈಗಾರಿಕೆಗಳು ಪ್ರಾರಂಭವಾಗಿದ್ದು, ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿಯಾಗಬೇಕು ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಕೇಸ್‌ಗಳನ್ನು ಹಾಕಲು ಕಾರ್ಖಾನೆಯ ಆಡಳಿತ ಮಂಡಳಿಯಿಂದ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಇದ್ದು, ಕಾರ್ಮಿಕರಿಗೆ ಅನುಕೂಲವಾಗಿಲ್ಲ ಯಾವುದೇ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು, ಜೊತೆಗೆ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವುದನ್ನು ಕೈಬಿಡಬೇಕು. ಕಾರ್ಮಿಕರ ರಕ್ಷಣೆಗೆ ನಿಲ್ಲುವಂತೆ ಆಡಳಿತ ಮಂಡಳಿಯು ಮುಂದಾಗುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ವಿ.ಹರೀಶ್ ಮಾತನಾಡಿ, ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇವೆ ಆಡಳಿತ ಮಂಡಳಿಯು ನಿರಾಕರಣೆಯಿಂದ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯದ ಆದೇಶವನ್ನು ಸಹ ಉಲ್ಲಂಘನೆ ಮಾಡಿದ್ದರೂ ಆದರೆ ಜಿಲ್ಲಾಡಳಿತ ಮಧ್ಯೆ ಪ್ರವೇಶದಿಂದ ಕೆಲವು ಬೇಡಿಕೆಗಳನ್ನು ಜಾರಿ ಮಾಡಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಉಳಿದ ಬೇಡಿಕೆಗಳನ್ನು ಕೂಡ ಈಡೇರಿಸಲು ಆಡಳಿತ ಮಂಡಳಿ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಪ್ರಮೋದ್ ಪೂಜಾರಿ, ಉಪಾಧ್ಯಕ್ಷರಾದ ರಮೇಶ್ ನಿಂಬುಜಿ, ಶರತ್ ಕುಮಾರ್, ಜಂಟಿ ಕಾರ್ಯದರ್ಶಿ ಪೃಥ್ವಿರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 hour ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

3 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

6 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

7 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

14 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

14 hours ago