ಕೋಲಾರ: ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಸಿಡಿ ಕ್ಲಚ್ ಕಾರ್ಖಾನೆಯ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಪ್ರತಿಭಟನೆಯು ಇಂದಿನಿಂದ ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಕ್ಷಿಡಿ ಕಂಪನಿಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮಧ್ಯೆ ಸುಮಾರು ಒಂದು ತಿಂಗಳಿಂದ ನಡೆಸುತ್ತಿರುವ ಧರಣಿಗೆ ಯಾವುದೇ ಸ್ವಂದನೆ ಸಿಕ್ಕಿಲ್ಲ ಜಿಲ್ಲಾಡಳಿತವು ಈಗಾಗಲೇ ಮಧ್ಯ ಪ್ರವೇಶಿಸಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕಿತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆಯಿಂದ ಅನಿವಾರ್ಯವಾಗಿ ಉಪವಾಸ ಸತ್ಯಾಗ್ರಹವನ್ನು ನಡೆಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಕ್ಸಿಡಿ ಕ್ಲಚ್ ಕಾರ್ಮಿಕರು ಒಂದು ತಿಂಗಳಿಂದ ಅನಿರ್ಧಿಷ್ಟಾವಧಿ ಹೋರಾಟವನ್ನು ನಡೆಸುತ್ತಿದ್ದರೂ ಕಾರ್ಖಾನೆಯ ಆಡಳಿತ ಮಂಡಳಿಯು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದೇ ಮೊಂಡುತನವನ್ನು ಪ್ರದರ್ಶಿಸುತ್ತಿರುವುದು ಖಂಡನೀಯ. ಕಾರ್ಮಿಕರ ಬೇಡಿಕೆಗಳನ್ನು ನ್ಯಾಯುಯುತವಾಗಿದ್ದು ಸ್ಥಳೀಯ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕಾಗಿದೆ ಸರಕಾರಗಳು ಕೂಡ ಗುತ್ತಿಗೆ ಆಧಾರದ ಕಾರ್ಮಿಕರನ್ನು ನಿರಂತರವಾಗಿ ಶೋಷಣೆ ಮಾಡಿದ್ದಾರೆ ಜಿಲ್ಲೆಯ ಅಭಿವೃದ್ಧಿಗೆ ಕಾರ್ಮಿಕರ ಪಾತ್ರ ಮುಖ್ಯವಾಗಿದ್ದು ಕೂಡಲೇ ಸೂಕ್ತ ಕ್ರಮ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಸುಮಾರು 15 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿ ಆದರೆ ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ದ ಕೇಸ್ ಗಳನ್ನು ಹಾಕಲು ಹೊರಟಿದ್ದಾರೆ ಕೂಡಲೇ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ನೂರಾರು ಕೈಗಾರಿಕೆಗಳು ಸ್ಥಾಪನೆ ಯಾಗುತ್ತಿರುವುದು ಸ್ವಾಗತಾರ್ಹವಾದರೂ, ಜಿಲ್ಲೆಯ ನಿರುದ್ಯೋಗಿ ಯುವಜನರಿಗೆ ಅಧ್ಯತೆ ನೀಡಬೇಕು ಇಲ್ಲಿನ ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಜೊತೆಗೆ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಪ್ರಮೋದ್, ಖಜಾಂಚಿ ಮಂಜುನಾಥ್, ಮುಂತಾದವರು ಇದ್ದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…