ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಮುತ್ತೂರು ಬಳಿ ಸೋಮವಾರ ಮುಂಜಾನೆ ನಡೆದಿದೆ.
ಮುತ್ತೂರು ಕಡೆಯಿಂದ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದತ್ತ ಮೂವರು ನಡೆದುಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಎರಡು ರೈಲ್ವೆ ಹಳಿಗಳಿರುವ ಮಾರ್ಗದ ತಿರುವಿನಲ್ಲಿ ರೈಲು ಬರುತ್ತಿರುವುದು ಗಮನಕ್ಕೆ ಬಾರದ ಹಿನ್ನೆಲೆಯಲ್ಲಿ ವೇಗವಾಗಿ ಬಂದ ಎಕ್ಸ್‌ಪ್ರೆಸ್ ರೈಲು ಮೂವರ ಮೇಲೂ ಹರಿದಿದೆ ಎಂದು ತಿಳಿದುಬಂದಿದೆ.
ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತರ ಗುರುತು ಪತ್ತೆ ಕಾರ್ಯ ಕೈಗೊಂಡಿದ್ದಾರೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳ ಮೇಲಿದ್ದ ಉಡುಪುಗಳ ಆಧಾರದ ಮೇಲೆ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದವರಿರಬಹುದು ಎಂದು ತಿಳಿದುಬಂದಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…