ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕೇಂದ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಘಾಟಿ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ದೇವರಲ್ಲಿ ಹರಕೆ ತೀರಿಸಿದರು.
ಘಾಟಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಯಾಗಿ ಅಯ್ಕೆಯಾದರೆ ಸುಬ್ರಹ್ಮಣ್ಯ ದೇವರಿಗೆ 101 ತೆಂಗಿನಕಾಯಿ ಒಡೆಯುವುದಾಗಿ ಹರಕೆ ಮಾಡಿಕೊಂಡಿದ್ದ ಅಭಿಮಾನಿಗಳು, ಸೋಮವಾರ ಬೆಳಗ್ಗೆ ದೇವಾಲಯದ ಮುಂಭಾಗದಲ್ಲಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರ ನೇತೃತ್ವದಲ್ಲಿ , ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.
ಮಾಜಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರು ಮಾತನಾಡಿ, ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಬಂದಿರುವುದು ಹಾಗೂ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿರುವುದರ ಜೊತೆಗೆ ನಮ್ಮ ನಾಯಕರದ ಕುಮಾರಸ್ವಾಮಿಯವರು ಕೇಂದ್ರದಲ್ಲಿ ಮಂತ್ರಿ ಆಗಿರುವುದು ನಮಗೆ ಬಹಳ ಸಂತೋಷವಾಗಿದೆ ಎಂದರು.
ಈ ವೇಳೆ ಹಳ್ಳಿ ರೈತ ಅಂಬರೀಷ್, ಜೆಡಿಎಸ್ ಯುವ ಮುಖಂಡ ಉದಯ್ ಆರಾಧ್ಯ, ಶ್ರೀಧರ್, ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಹಾಜರಿದ್ದರು.