ಎಟಿಎಂನಿಂದ ಹಣ ಬಾರದಿದ್ದರೆ, ಯಾರೋ ಕಳ್ಳರು ನಿಮ್ಮ ಹಣಕ್ಕೆ ಕನ್ನ ಹಾಕಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು. ಚಿಕ್ಕಬಳ್ಳಾಪುರದಲ್ಲಿ ಎಟಿಎಂ ಯಂತ್ರಕ್ಕೆ ವಿಶೇಷ ಸಾಧನ ಅಳವಡಿಸಿ, ಗ್ರಾಹಕರು ಡ್ರಾ ಮಾಡಿದ ಹಣವನ್ನು ದೋಚುತ್ತಿದ್ದ ಚಾಲಾಕಿ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಇದೀಗ ಬಂಧಿಸಿದ್ದಾರೆ.
ಏನಿದು ಹೊಸ ಮಾದರಿಯ ಕಳ್ಳತನ? ಯಾರು ಈ ಆರೋಪಿ? ನೋಡೋಣ ಬನ್ನಿ….
ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಏಪ್ರಿಲ್ 11 ರ ರಾತ್ರಿ ಸಿನಿಮೀಯ ರೀತಿಯ ಕಳ್ಳತನ ನಡೆದಿದೆ. ಕಳ್ಳರು ಎಟಿಎಂನಿಂದ ಹಣ ಹೊರಬರುವ ಜಾಗಕ್ಕೆ ಒಂದು ಸಾಧನವನ್ನು ಅಳವಡಿಸಿದ್ದಾರೆ. ಗ್ರಾಹಕರು ಹಣ ಡ್ರಾ ಮಾಡಿದಾಗ, ನೋಟುಗಳು ಹೊರಬರುವ ಬದಲು ಆ ಸಾಧನದೊಳಗೆ ಸಿಲುಕಿಕೊಳ್ಳುತ್ತಿದ್ದವು. ಹಣ ಬರಲಿಲ್ಲವೆಂದು ತಿಳಿದು ಗ್ರಾಹಕರು ಅಲ್ಲಿಂದ ಹೊರಟುಹೋದ ನಂತರ, ಕಳ್ಳರು ಎಟಿಎಂಗೆ ಬಂದು ಸಾಧನದಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಂದಾಜು 2 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದರು.
ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಪ್ರಕರಣದ ದೂರಿನ ಅನ್ವಯ, ಪೊಲೀಸರು ವಿಶೇಷ ತಂಡ ರಚಿಸಿಕೊಂಡು ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದರು. ಆರೋಪಿಯು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿರುವುದು ಪತ್ತೆಯಾಯಿತು. ಪೊಲೀಸರ ತಂಡ ಬೆಂಗಳೂರಿಗೆ ತೆರಳಿ, ತ್ರಿಪುರಾ ಮೂಲದ ನಿಯಾಜ್ ಉದ್ದೀನ್ ಎಂಬ 20 ವರ್ಷದ ಯುವಕನನ್ನು ಬಂಧಿಸಿದೆ.
ಈತ ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ಆತನಿಂದ 15 ಸಾವಿರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಟ್ಟಿನಲ್ಲಿ, ಹೊಸ ತಂತ್ರ ಬಳಸಿ ಎಟಿಎಂ ದೋಚುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಈ ಘಟನೆ ಎಟಿಎಂ ಬಳಸುವ ಸಾರ್ವಜನಿಕರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ. ಎಟಿಎಂ ಬಳಸುವಾಗ ಹಣ ಬರದಿದ್ದರೆ, ತಕ್ಷಣವೇ ಬ್ಯಾಂಕಿನ ಸಹಾಯವಾಣಿಗೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಗತ್ಯ.
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…