ಬೈಂದೂರು ಠಾಣಾ ವ್ಯಾಪ್ತಿಯ ಎಟಿಎಂ ಕೇಂದ್ರಗಳಲ್ಲಿ ಜನರಿಗೆ ಸಹಕಾರ ನೀಡುವ ನೆಪ ಹೇಳಿ ವಂಚಿಸಿ ಎಟಿಎಂ ಕಾರ್ಡ್ ಬದಲಾಯಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಠಾಣೆ ಪಿಎಸ್ಐ ಹಾಗೂ ತಂಡ ಯಶಸ್ವಿಯಾಗಿದ್ದಾರೆ.
ಜ.10 ರಂದು ಕುಂದಾಪುರದಲ್ಲಿ ಹರಿಯಾಣ ರಾಜ್ಯದ ಬರ್ಸಿ ಜಟಾನ್ ಮೂಲದ ಸಂದೀಪ(36), ಹಾಗೂ ಔರಂಗನಗರ ಮೂಲದ ರವಿ(27), ಎಂಬ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 21 ಸಾವಿರ ಹಣ, 217ಎಟಿಎಂ ಕಾರ್ಡ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂ, ಶಿರೂರು ಕೆನರಾ ಬ್ಯಾಂಕ್ ಎಟಿಎಂ ಹಾಗೂ ಬೈಂದೂರು ಎಸ್ ಬಿಐ ಬ್ಯಾಂಕ್ ಎಟಿಎಂ ನಲ್ಲಿ ಗ್ರಾಹಕರ ಸೋಗಿನಲ್ಲಿ ಎಟಿಎಂ ಒಳಗಡೆ ಹೋಗಿ ಜನರಿಗೆ ಸಹಕರಿಸುವಂತೆ ನಟಿಸಿ, ಮೋಸ ಮಾಡಿ ಎಟಿಎಂ ಕಾರ್ಡ್ ತೆಗೆದುಕೊಂಡು ಮತ್ತೆ ಅದನ್ನ ಅದಲುಬದಲು ಮಾಡಿ, ಜನರಿಂದ ಪಡೆದಿದ್ದ ಎಟಿಎಂ ಕಾರ್ಡ್ ಬಳಸಿ 2,26,000 ಹಣವನ್ನ ವಿತ್ ಡ್ರಾ ಮಾಡಿಕೊಂಡು ಹೋಗಿರುತ್ತಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಆರೋಪಿಗಳ ಪತ್ತೆ ಮಾಡಲು ವಿಶೇಷ ತಂಡವನ್ನು ರಚನೆ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಈ ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…