ಎತ್ತಿನಗಾಡಿ ಮತ್ತು ಕಾರ್ ನಡುವೆ ಅಪಘಾತವಾಗಿರುವ ಘಟನೆ ಕೆ.ಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಅರಸಿನಕೆರೆ ಬ್ರಿಡ್ಜ್ ಬಳಿ ನಡೆದಿದೆ.
ಡಿಕ್ಕಿ ರಭಸಕ್ಕೆ ಎತ್ತಿನಗಾಡಿ ಸವಾರನಿಗೆ ಗಾಯಗಳಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ 112 ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದರು.
ಸದ್ಯ ಜೋಡೆತ್ತುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಹಾಗೂ ಎತ್ತಿನ ಗಾಡಿ ಜಖಂಗೊಂಡಿವೆ.