ಎತ್ತಿನಹೊಳೆ ಜಲಾಶಯ: ಬರಡು ಭೂಮಿ ಸರ್ಕಾರಿ ಜಮೀನು ಇರುವ ಕಡೆ ಜಲಾಶಯ ನಿರ್ಮಿಸಲಿ: ನಮ್ಮ ಭೂಮಿ, ಮನೆ ನಮಗೆ ಬೇಕು- ಲಕ್ಕೇನಹಳ್ಳಿಯಲ್ಲಿ ರೈತರ ಪಟ್ಟು

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ಸಾಸಲು ಹೋಬಳಿಯಲ್ಲಿ ಹೆಚ್ಚಾಗಿ ಭೂಮಿತಾಯಿಯನ್ನೇ ನಂಬಿ ಬದುಕುತ್ತಿದ್ದೇವೆ. ನಮಗೆ ವ್ಯವಸಾಯ ಬಿಟ್ಟರೆ ಬೇರೇನು ಬರುವುದಿಲ್ಲ. ಸುಮಾರು 10 ಕೋಟಿಗೂ ಹೆಚ್ಚು‌ ವಹಿವಾಟಿನ ಅಡಿಕೆ ಬೆಳೆ ಬೆಳೆಯುತ್ತೇವೆ. ಈಗಿದ್ದಾಗ ಇಲ್ಲಿ ಡ್ಯಾಂ ನಿರ್ಮಾಣ‌ ಮಾಡಿ‌ ನಮ್ಮ‌ ಬದುಕನ್ನು‌ ನಾಶ ಮಾಡಲು‌ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ದಯವಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ, ನಮಗೆ ಪರಿಹಾರ ಬೇಡ, ನಮಗೆ ನಮ್ಮ ಬದುಕು ಮುಖ್ಯ. ಆದ್ದರಿಂದ ಇಲ್ಲಿ ಡ್ಯಾಂ ನಿರ್ಮಾಣ ಮಾಡಿ ನಮ್ಮ ಬದುಕಿಗೆ ಕೊಳ್ಳಿ ಇಡಬೇಡಿ ಎಂದು ಮನವಿ ಮಾಡಿದರು.

ಜೂ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿಗಳ ಸ್ಥಳವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿ. ಇದೇ ವೇಳೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಈ‌ ಸಭೆಯಲ್ಲಿ ಅವರು ಹೇಳಿದ ಮಾತುಗಳನ್ನು ನಾವು ಕೇಳಿದ್ದೇವೆ ಅಷ್ಟೆ, ನಮ್ಮ ಮಾತು, ನಮ್ಮ ಅಹವಾಲನ್ನು ಅವರು ಸ್ವೀಕರಿಸದೇ ಸಭೆಯನ್ನು ಮುಕ್ತಾಯಗೊಳಿಸಿ ಹೊರಟು ಹೋದರು ಎಂದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುತ್ತಿರುವ ಲಕ್ಕೇನಹಳ್ಳಿ, ದಾಸರಪಾಳ್ಯ, ಶ್ರೀರಾಮನಹಳ್ಳಿ ಮುಂತಾದ ಗ್ರಾಮಗಳ ರೈತ ಮಹಿಳೆಯರು ಮಾತನಾಡಿ, ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಸಾಸಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ನಂದಿನಿ ಪ್ರಸನ್ನ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

3 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

6 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

6 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

7 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

10 hours ago