ದೊಡ್ಡಬಳ್ಳಾಪುರ: ಜಲಸಂಪನ್ಮೂಲ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳ ಪರಿವೀಕ್ಷಣಾ ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭಾಗವಹಿಸಿದರು.
ಸಭೆಯಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರೈತರ ಅಭಿಪ್ರಾಯಕ್ಕೆ ಗೌರವ ನೀಡಿ, ಡ್ಯಾಂ ನಿರ್ಮಾಣವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ಮನವಿ ಸಲ್ಲಿಸಿದರು.
ಇದಲ್ಲದೆ, ಎತ್ತಿನಹೊಳೆ ಯೋಜನೆ ಕಾಮಗಾರಿಗಳಿಂದ ಕ್ಷೇತ್ರದ ಹಲವು ಗ್ರಾಮಗಳ ರಸ್ತೆಗಳಿಗೆ ಹಾನಿಯಾಗಿದ್ದು, ಅವುಗಳ ದುರಸ್ತಿ ಕಾಮಗಾರಿಗೆ ಅಗತ್ಯ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾ ರೆಡ್ಡಿ, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ರೈತರು ಹಾಗೂ ಶಾಸಕ ಧೀರಜ್ ಮುನಿರಾಜ್ ಸಲ್ಲಿಸಿರುವ ಮನವಿ ಮತ್ತು ಅಹವಾಲುಗಳನ್ನು ಸ್ವೀಕರಿಸಿದ್ದು, ಅವುಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಪ್ರಮುಖರು ಉಪಸ್ಥಿತರಿದ್ದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…