ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನವದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ, ದಕ್ಷಿಣ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.
ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವ ಸಲ್ಲಿಸಿದೆ ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.
ಈ ಪ್ರಸ್ತಾವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಸಲಹಾ ಸಮಿತಿಯು ಜೂನ್ 24 ರಂದು ಚರ್ಚಿಸಿತ್ತು. ನಂತರ ಜುಲೈ 7 ರಂದು ಅರಣ್ಯಗಳ ಮಹಾನಿರೀಕ್ಷಕರು ( Inspector General of Forests) EDS (ಅಗತ್ಯ ವಿವರ) ಕೋರಿದ್ದಾರೆ.
ಇದು ಪರಿಸರ ಅಥವಾ ಅರಣ್ಯ ಬಳಕೆಗೆ ಅಗತ್ಯವಿರುವ ಯೋಜನೆಗಳ ಮೌಲ್ಯಮಾಪನದ ಸಮಯದಲ್ಲಿ ಕೇಂದ್ರ ಸಚಿವಾಲಯವು ಬಳಸುವ ಔಪಚಾರಿಕ ಪ್ರಕ್ರಿಯೆಯಾಗಿದೆ. EDS ಸಿದ್ಧಪಡಿಸಲಾಗುತ್ತಿದ್ದು, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಆದಷ್ಟು ಬೇಗ ತಾತ್ವಿಕ ಅನುಮೋದನೆ ನೀಡಲು ನಿಮ್ಮ ಮಧ್ಯಸ್ಥಿಕೆ ಕೋರುವುದಾಗಿ ಡಿಕೆ ಶಿವಕುಮಾರ್ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಅನುಷ್ಟಾನದಿಂದ ಏಳು ಜಿಲ್ಲೆಗಳಲ್ಲಿ 75.59 ಲಕ್ಷ ಜನರಿಗೆ ಅನುಕೂಲವಾಗಲಿದೆ. 527 ಕೆರೆಗಳನ್ನು ಅವುಗಳ ಶೇ. 50 ರಷ್ಟು ಸಾಮರ್ಥ್ಯದಷ್ಟು ತುಂಬಿಸಲು ಮತ್ತು ಅಂತರ್ಜಲದ ಮಟ್ಟವನ್ನು ಮರುಪೂರಣಗೊಳಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ಯೋಜನೆಯು ಕರ್ನಾಟಕದ 6,657 ಹಳ್ಳಿಗಳು ಮತ್ತು 38 ಪಟ್ಟಣಗಳ 75 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…