ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆಗೆ ಮನವಿ

ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ನವದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ, ದಕ್ಷಿಣ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.

ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವ ಸಲ್ಲಿಸಿದೆ ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.

ಈ ಪ್ರಸ್ತಾವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಸಲಹಾ ಸಮಿತಿಯು ಜೂನ್ 24 ರಂದು ಚರ್ಚಿಸಿತ್ತು. ನಂತರ ಜುಲೈ 7 ರಂದು ಅರಣ್ಯಗಳ ಮಹಾನಿರೀಕ್ಷಕರು ( Inspector General of Forests) EDS (ಅಗತ್ಯ ವಿವರ) ಕೋರಿದ್ದಾರೆ.

ಇದು ಪರಿಸರ ಅಥವಾ ಅರಣ್ಯ ಬಳಕೆಗೆ ಅಗತ್ಯವಿರುವ ಯೋಜನೆಗಳ ಮೌಲ್ಯಮಾಪನದ ಸಮಯದಲ್ಲಿ ಕೇಂದ್ರ ಸಚಿವಾಲಯವು ಬಳಸುವ ಔಪಚಾರಿಕ ಪ್ರಕ್ರಿಯೆಯಾಗಿದೆ. EDS ಸಿದ್ಧಪಡಿಸಲಾಗುತ್ತಿದ್ದು, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಆದಷ್ಟು ಬೇಗ ತಾತ್ವಿಕ ಅನುಮೋದನೆ ನೀಡಲು ನಿಮ್ಮ ಮಧ್ಯಸ್ಥಿಕೆ ಕೋರುವುದಾಗಿ ಡಿಕೆ ಶಿವಕುಮಾರ್ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಎತ್ತಿನಹೊಳೆ ಯೋಜನೆ ಅನುಷ್ಟಾನದಿಂದ ಏಳು ಜಿಲ್ಲೆಗಳಲ್ಲಿ 75.59 ಲಕ್ಷ ಜನರಿಗೆ ಅನುಕೂಲವಾಗಲಿದೆ. 527 ಕೆರೆಗಳನ್ನು ಅವುಗಳ ಶೇ. 50 ರಷ್ಟು ಸಾಮರ್ಥ್ಯದಷ್ಟು ತುಂಬಿಸಲು ಮತ್ತು ಅಂತರ್ಜಲದ ಮಟ್ಟವನ್ನು ಮರುಪೂರಣಗೊಳಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯು ಕರ್ನಾಟಕದ 6,657 ಹಳ್ಳಿಗಳು ಮತ್ತು 38 ಪಟ್ಟಣಗಳ 75 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago