ದೊಡ್ಡಬಳ್ಳಾಪುರ: ಎತ್ತಿನಹೊಳೆ ಯೋಜನೆಯಲ್ಲಿ ಸಂವಿಧಾನಾತ್ಮಕ ಕಾನೂನು, ಪರಿಸರ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಈ ಯೋಜನೆಯು ಅವೈಜ್ಞಾನಿಕತೆಯಿಂದ ಕೂಡಿದೆ. ನ್ಯಾಯಾಲಯ ತಜ್ಞರ ಸಮಿತಿ ರಚಿಸಿ ವೈಜ್ಞಾನಿಕ ಮಾಹಿತಿ ಪಡೆದು ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ತಾಲ್ಲೂಕಿನ ಲಕ್ಕೇನಹಳ್ಳಿ ಗ್ರಾಮದ ರೈತ ಬೈರಣ್ಣ ಅವರು ಹೈಕೋರ್ಟ್ ನಲ್ಲಿ ಗುರುವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ರೈತ ಬೈರಣ್ಣ ಅವರ ಪರವಾಗಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ನರಸಿಂಹಗೌಡ ಮಾಹಿತಿ ನೀಡಿ, ಎತ್ತಿನಹೊಳೆ ಯೋಜನೆಯಿಂದ ಬರುವ ನೀರಿನ ಸಂಗ್ರಹಣೆಗಾಗಿ ನಿರ್ಮಿಸಲಾಗುತ್ತಿರುವ ಜಲಾಶಯದಿಂದ ಮುಳುಗಡೆಯಾಗುತ್ತಿರುವ ಗ್ರಾಮಗಳ ಮತ್ತಷ್ಟು ಜನ ರೈತರು ಆಗಸ್ಟ್ 11 ರಂದು ಹೈಕೋರ್ಟ್ಗೆ ಅರ್ಜಿಗಳನ್ನು ಸಲ್ಲಿಸಲಿದ್ದಾರೆ ಎಂದರು.
ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿಗಳು,ಅರಣ್ಯ ಜೀವಪರಿಸ್ಥಿತಿ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿ, ಗೃಹ ಇಲಾಖೆ, ಕರ್ನಾಟಕ ನೀರಾವರಿ ನಿಗಮ, ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ, ರಾಜ್ಯ ಮಹಾಲೆಕ್ಕ ಪರಿಶೋಧಕರು,ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಪ್ರತಿವಾಧಿಗಳನ್ನಾಗಿ ಮಾಡಲಾಗಿದೆ.
ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಯೋಜನೆ ಹೆಸರಿನಲ್ಲಿ ಸಾಮಾಜಿ, ಪರಿಸರ ಪರಿಣಾಮ ಅಧ್ಯಯನ ತಪ್ಪಿಸಿ ಜೀವ ವಿರೋಧಿ ಯೋಜನೆಯಾಗಿ ಮುಂದುವರೆಸಲಾಗುತ್ತಿದೆ. ಸಂವಿಧಾನಾತ್ಮಕ ಕಾನೂನುಗಳು, ಪರಿಸರ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಕೇಂದ್ರ ಅರಣ್ಯ,ಪರಿಸರ ಹವಾಮಾನ ಬದಲಾವಣೆ ಸಚಿವಾಲಯದ ತಂಡ ಇತ್ತೀಚೆಗೆ ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಆಕ್ಷೇಪ ವ್ಯಕ್ತಪಡಿಸಿದ್ದರೂ ಸಹ ಕಾಮಗಾರಿ ಮುಂದುವರಿಸಲಾಗುತ್ತಿದೆ. ಬೆಂಗಳೂರಿನ ಐಐಎಸ್ಸಿ, ನ್ಯಾಷನಲ್ ಇನ್ಸ್ಟೂಟ್ ಹೈಡ್ರಾಲಜಿ, ಕೇಂದ್ರ ಜಲ ಆಯೋಗ, ಇವೆಲ್ಲವು ಸಹ ಎತ್ತಿನಹೊಳೆ ಪ್ರದೇಶದಲ್ಲಿ ಮಳೆ ನೀರಿನ ಲಭ್ಯತೆ ಕಡಿಮೆ ಇದೆ ಎಂದು ಅಭಿಪ್ರಾಯ ತಿಳಿಸಿದ್ದರು ಕಾಮಗಾರಿ ನಡೆಸಲಾಗುತ್ತಿದೆ. ಅತ್ಯಂತ ಸೂಕ್ಷ್ಮ ಜೀವವೈದ್ಯವನ್ನು ಹೊಂದಿರುವ ಪಶ್ಚಿಮಘಟ್ಟಕ್ಕೆ ಎತ್ತಿನಹೊಳೆ ಯೋಜನೆ ಕಾಮಗಾರಿಯಿಂದ ಧಕ್ಕೆಯಾಗಿದೆ. ಇದು ದಕ್ಷಿಣ ಭಾರತದ ಮಳೆ ಮಾಪನದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ದಾಖಲೆಗಳ ಸಮೇತ ಮನವರಿಕೆ ಮಾಡಲಾಗಿದೆ ಎಂದರು.
ಕೊರಟಗೆರೆ ತಾಲ್ಲೂಕಿನ ಬೈರಗೊಂಡ್ಲು ಪ್ರದೇಶದಲ್ಲಿ 5 ಟಿ.ಎಂ.ಸಿ ನೀರು ಸಂಗ್ರಹಕ್ಕೆ ಜಲಾಶಯ ನಿರ್ಮಿಸಲು ಯೋಜನೆ ಸಿದ್ದಪಡಿಸಲಾಗಿತ್ತು. ಆದರೆ ಸ್ಥಳೀಯ ರಾಜಕೀಯ ಒತ್ತಡ ಹಾಗೂ ರೈತರ ವಿರೋಧಕ್ಕೆ ಮಣಿದ ರಾಜ್ಯ ಸರ್ಕಾರ ಈಗ 3.20 ಟಿಎಂಸಿ ನೀರು ಸಂಗ್ರಹಕ್ಕೆ ಯೋಜನೆ ರೂಪಿಸಿ ಜಲಾಶಯವನ್ನು ಲಕ್ಕೇನಹಳ್ಳಿ, ವಡೇರಹಳ್ಳಿ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ಜಲಾಶಯ ನಿರ್ಮಿಸಲು ಹೊರಟಿರುವ ಪ್ರದೇಶದಲ್ಲಿ ಸುಮಾರು 7 ಗ್ರಾಮಗಳು ಸೇರಿದಂತೆ 2,500 ಎಕರೆ ಫಲವತ್ತಾದ ಕೃಷಿ ಜಮೀನು ಮುಳುಗಡೆಯಾಗುತ್ತಿದೆ. ಜಲಾಶಯ ನಿರ್ಮಾಣವಾಗುತ್ತಿರುವ ಗ್ರಾಮಗಳಲ್ಲಿ ಸಭೆ ನಡೆಸಿ ಜನರ ಅಭಿಪ್ರಾಯವನ್ನೇ ಪಡೆದಿಲ್ಲ. ನಿಖರವಾದ ಡಿಪಿಆರ್ ಇಲ್ಲದೇ ಎತ್ತಿನಹೊಳೆ ಯೋಜನೆ ಮುಂದುವರೆಸಲಾಗುತ್ತಿದೆ. ಇದರಿಂದ ಯೋಜನಾ ವೆಚ್ಚವನ್ನು ಬೇಕಾಬಿಟ್ಟಿ ಹೆಚ್ಚಿಸುವ ಮೂಲಕ ಸರ್ಕಾರದ ಭೊಕ್ಕಸಕ್ಕೆ ದೊಡ್ಡ ಮೊತ್ತದ ನಷ್ಟ ಉಂಟುಮಾಡಲಾಗಿದೆ. ಯೋಜನೆಗೆ ಬಳಸಲಾಗಿರುವ ಎಲ್ಲಾ ನಿಯಮಗಳು ಅವೈಜ್ಞಾನಿಕವಾಗಿವೆ. ಇದರ ವಿರುದ್ಧ ಸೂಕ್ತ ವಿಚಾರಣೆ ನಡೆಸಿ ಜಲಾಶಯ ನಿರ್ಮಾಣದ ನೆಪದಲ್ಲಿ ರೈತರನ್ನು ಗ್ರಾಮಗಳಿಂದ ಒಕ್ಕಲೆಬ್ಬಿಸದೆ ಹಾಗೂ ಫಲವತ್ತಾದ ಕೃಷಿ ಜಮೀನು ಉಳಿಸಿಕೊಡುವಂತೆ ನ್ಯಾಯಾಲಯವನ್ನು ಕೋರಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…