ಕೋಲಾರ: ನಗರದ ಹೊರವಲಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರ ಭ್ರಷ್ಟಾಚಾರದ ವಿರುದ್ದ ದೂರು ನೀಡಿ 50 ದಿನ ಕಳೆದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಎಪಿಎಂಸಿ ಕಚೇರಿ ಎದುರು ಶುಕ್ರವಾರ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ ಎಪಿಎಂಸಿ ಸಹಾಯಕ ನಿರ್ದೇಶಕ ರವಿಕುಮಾರ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಂಡಿ ಮಾಲೀಕ ಜಿ.ಬಿ.ಆರ್ ಸತೀಶ್ ಮಾತನಾಡಿ, ಎಪಿಎಂಸಿಯಲ್ಲಿ ರೈತರು, ಮಂಡಿ ಮಾಲೀಕರು ಹಾಗೂ ದಲ್ಲಾಳಿಗಳ ಮಾರುಕಟ್ಟೆಗೆ ಸಂಬಂಧಿಸಿದಂತೆ ಯಾವುದೇ ಕೆಲಸಗಳು ಆಗಬೇಕಾದರೂ ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ಅವರಿಗೆ ಲಂಚ ನೀಡಬೇಕಾಗಿದೆ. ಇದಕ್ಕೆ ಸಂಬಂಧಿಸಿದ ಲಂಚದ ದಾಖಲೆಗಳು ಸಹ ಇದ್ದು, ಈ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂದು ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದ್ದು ಅಧಿಕಾರಿಗಳು ಬಂದು ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ ಹೊರತು ಅವರ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ದೂರಿದರು.
ಈ ಸಂದರ್ಭದಲ್ಲಿ ಸಂಘದ ಮುಖಂಡ ಎಪಿಎಂಸಿ ಪುಟ್ಟುರಾಜು ಮಾತನಾಡಿ, ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ ಪರಿಣಾಮವಾಗಿ ಯಾವುದೇ ಕೆಲಸ ಆಗಬೇಕಾದರೆ ದೂರಿನ ನೆಪದಲ್ಲಿ ನಮ್ಮಗಳ ಮೇಲೆ ವಿನಾಕಾರಣ ಕಿರುಕುಳ ನೀಡುತ್ತಾರೆ. ಸರಕಾರ ನಿಗದಿಪಡಿಸಿದ ಧರಕ್ಕಿಂತ ಹೆಚ್ಚಿನ ಹಣವನ್ನು ಅಧಿಕಾರಿಗಳಿಗೆ ನೀಡಬೇಕು ಇದಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಮೇಲಿನ ಅಧಿಕಾರಿಗಳಿಗೆ ಕೊಟ್ಟರು ಇಂತಹ ಭ್ರಷ್ಟ ಅಧಿಕಾರಿಯನ್ನು ಇನ್ನೂ ಇಲ್ಲೇ ಉಳಿಸಿಕೊಂಡು ಇದ್ದಾರೆ ಎಂದು ದೂರಿದರು.
ನಮ್ಮಲ್ಲಿ ದಲ್ಲಾಳರ ಪರವಾನಗಿ ಪಡೆಯಲು 20 ಸಾವಿರದಿಂದ 40 ಸಾವಿರದಷ್ಟು ಹಣವನ್ನು ಜೊತೆಗೆ
ವ್ಯಕ್ತಿಗೆ ಅನುಗುಣವಾಗಿ ಲಂಚ ಕೊಡಬೇಕು. ಕೊಡದೇ ಹೋದರೆ ಯಾವುದೇ ಕೆಲಸವು ಮಾಡಿಕೊಡುವುದಿಲ್ಲ ಎಂದು ನೇರವಾಗಿ ಹೇಳುತ್ತಾರೆ. ಎಪಿಎಂಸಿ ಆವರಣದ ಒಳಗಡೆ ಜಾಗದ ಸಮಸ್ಯೆಯಿಂದ ಸುಮಾರು 63 ಜನ ತರಕಾರಿ ಮಂಡಿ ಮಾಲೀಕರು ನಮ್ಮ ಫೆಡರೇಶನ್ ಜಾಗದಲ್ಲಿ ಇದ್ದು, ಅದಕ್ಕೆ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರೂ ಆ ಜಾಗದಲ್ಲಿ ಅಭಿವೃದ್ಧಿ ಮಾಡಲು ಅವಕಾಶವಿಲ್ಲ ಎಂದವರು, ನಾವು ಮಾಡಿದ ಅಭಿವೃದ್ಧಿಗೆ ಇಲಾಖೆಯ ಕಡೆಯಿಂದ ಕಾಮಗಾರಿಗಳಿಗೆ ಬಿಲ್ ಮಾಡಿಕೊಂಡಿದ್ದಾರೆ. ಎಪಿಎಂಸಿಯ ಅಭಿವೃದ್ಧಿ ಕೆಲಸಗಳು ಬಗ್ಗೆ ಮಾಹಿತಿ ಪಡೆದು ತನಿಖೆ ಮಾಡಿಸಿದರೆ ಇನ್ನಷ್ಟು ಸತ್ಯ ಬಯಲಿಗೆ ಬರಲಿದೆ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆ.ಎನ್.ಜಿ ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರೇಶ್ ಮಾತನಾಡಿ, ಎಪಿಎಂಸಿ ಭ್ರಷ್ಟಾಚಾರದ ಬಗ್ಗೆ ಮೇಲಿನ ಅಧಿಕಾರಿಗಳು ಎಚ್ಚತ್ತುಕೊಂಡು ಕಾರ್ಯದರ್ಶಿ ವಿಜಯಲಕ್ಷ್ಮಿ ಅವರನ್ನು ವಜಾಗೊಳಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಎಲ್ಲಾ ಮಂಡಿ ಮಾಲೀಕರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ತಮ್ಮ ವೈವಾಟನ್ನು ಸ್ಥಗಿತಗೊಳಿಸಿ ಎಪಿಎಂಸಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ತರಕಾರಿ ದಲ್ಲಾಳರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ವೆಂಕಟೇಗೌಡ, ಖಜಾಂಚಿ ನಾಗೇಶ್, ಉಪಾಧ್ಯಕ್ಷ ಗೋಪಾಲಕೃಷ್ಣ, ಪದಾಧಿಕಾರಿಗಳಾದ ವೆಂಕಟರಾಮ್, ವೆಂಕಟೇಶ್, ಮುನಿರಾಜು, ಮಂಜುನಾಥರೆಡ್ಡಿ, ಶ್ರೀನಿವಾಸ್, ರೆಡ್ಡೆಪ್ಪ, ನವೀನ್ ಮುಂತಾದವರು ಇದ್ದರು
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…