ಎಪಿಎಂಸಿ ಜಾಗ, ಮೆಡಿಕಲ್ ಕಾಲೇಜು, ಕೆಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಜಿಲ್ಲಾ ಕೇಂದ್ರದಲ್ಲಿ ಎಪಿಎಂಸಿ ಮಾರುಕಟ್ಟೆಗೆ ಜಾಗ ಮಂಜೂರು ಸೇರಿದಂತೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಬಜೆಟ್ ನಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಒತ್ತಾಯಿಸಿದರು

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಟೊಮೆಟೊ‌ ಹಾಗೂ ತರಕಾರಿ ಮಾರುಕಟ್ಟೆಯ ಸಮಸ್ಯೆಗಳು ಆಗರವಾಗಿದೆ ಪಕ್ಕದ ರಾಜ್ಯದ ವಿ.ಕೋಟಾದಲ್ಲಿ ಸುಮಾರು100 ಎಕರೆಯಲ್ಲಿ ಮಾರುಕಟ್ಟೆ ನಿರ್ಮಿಸುತ್ತಿದ್ದು, ಅದು ಸಿದ್ಧವಾದರೆ 50 ಕಿ.ಮೀ ದೂರವಿರುವ ಅಲ್ಲಿಗೆ ಮಾರಾಟಗಾರರು, ವರ್ತಕರು ಹೋಗುತ್ತಾರೆ. ಇಲ್ಲಿನ ಎಪಿಎಂಸಿಗೆ ನಷ್ಟವಾಗಲಿದೆ ಸರ್ಕಾರವು ಕೈಗಾರಿಕೆಗಳಿಗೆ ಜಾಗ ಕೊಡುತ್ತಾರೆ, ಆದರೆ, ರೈತರಿಗಾಗಿ‌ ಇರುವ ಎಪಿಎಂಸಿಗೆ ಜಾಗ ಕೊಡುತ್ತಿಲ್ಲ ಕೂಡಲೇ ಈ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರುವ ಕೆ.ಸಿ.ವ್ಯಾಲಿ ಮತ್ತು ಹೆಚ್.ಎನ್ ವ್ಯಾಲಿಯ ನೀರನ್ನು ಮೂರನೇ ಹಂತದ ಶುದ್ಧೀಕರಣಕ್ಕೆ ಅನುದಾನ ಮೀಸಲಿಟ್ಟು ಸುಮಾರು ವರ್ಷಗಳಿಂದ ಎತ್ತಿನಹೊಳೆ ಯೋಜನೆಯ ಮೂಲಕ ನೀರು ಕೊಡತ್ತೇವೆ ಎಂದು ನಮ್ಮನ್ನು ಆಳುವ ಸರ್ಕಾರಗಳು ಮೂರ್ಖರನ್ನಾಗಿಸುತ್ತಿದೆ‌ ವರ್ಷದಲ್ಲಿ ಹಣ ಬಿಡುಗಡೆ ಮಾಡಿ ಯೋಜನೆ ಪೂರ್ಣಗೊಳಿಸಬೇಕು ಕೃಷ್ಣಾ ನದಿಯ ಬಿ ಸ್ಕೀಮ್ ನಲ್ಲಿ ನಮ್ಮ ಪಾಲಿನ ನೀರು ತರಲು ಅನುದಾನ ಕೊಡಬೇಕು ಬಜೆಟ್‌ನಲ್ಲಿ ಜಿಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದೆ ಉಗ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು,

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಬೆಟ್ಟಶೆಟ್ಟಹಳ್ಳಿ ರಮೇಶ್ ಮಾತನಾಡಿ ಜಿಲ್ಲೆಯ ರೈತರು ಸ್ವಾಭಿಮಾನಿಗಳು ಕಷ್ಟಕರ ಪಟ್ಟು ಟೊಮೆಟೊ ಆಲೂಗಡ್ಡೆ ಸೇರಿದಂತೆ ತರಕಾರಿಗಳನ್ನು ಬೆಳೆಯುತ್ತಾರೆ ಆದರೆ ಅವುಗಳಿಗೆ ಸಂಸ್ಕರಣಾ ಘಟಕವಿಲ್ಲದೇ ಸಮಸ್ಯೆಯಾಗುತ್ತಿದೆ ಕೂಡಲೇ ಸಂಸ್ಕರಣಾ ಘಟಕ ಸ್ಥಾಪಿಸಬೇಕು ವೈದ್ಯಕೀಯ ಹಾಗೂ ಇಂಜಿನಿಯರ್ ಕಾಲೇಜಿಗೆ ಬಂಗಾರಪೇಟೆ ತಾಲ್ಲೂಕಿನ ಗಡಿ ಭಾಗದಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು ಶಾಶ್ವತ ಪರಿಹಾರ ನೀಡಲು ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಬಯಲುಸೀಮೆ ವಿಭಾಗದ ಕಾರ್ಯದರ್ಶಿ ಪ್ರಭಾಕರ್ ಮಾತನಾಡಿ ಕೋಲಾರ ಜಿಲ್ಲೆಯಾದ್ಯಂತ ರಸ್ತೆಗಳು ಹಾಳಾಗಿದ್ದು ಸಾರ್ವಜನಿಕ ಹಿಡಿಶಾಪ ಹಾಕುತ್ತಿದ್ದಾರೆ ಕೂಡಲೇ ಹಣ ಬಿಡುಗಡೆ ಮಾಡಿ ರಸ್ತೆಗಳ ದುರಸ್ತಿ ಮಾಡಬೇಕು ವಿಶ್ವದಲ್ಲೇ ಹೆಚ್ಚು ಮಾವು ಬೆಳೆಯುವ ಶ್ರೀನಿವಾಸಪುರ ತಾಲೂಕಿನಲ್ಲಿ ಮಾವಿನ ಸಂಸ್ಕರಣಾ ಘಟಕವನ್ನು ಮಂಜೂರು ಮಾಡಿಸಿ ರೈತರಿಗೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ, ಹಸಿರು ಸೇನೆ ರಾಜ್ಯ ಸಂಚಾಲಕ ಕೆ.ಆನಂದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಹಳ್ಳಿ ರಮೇಶ್, ಮುಖಂಡರಾದ ತಿಮ್ಮಾರೆಡ್ಡಿ, ಚಿನ್ನಾಪುರ ಮಂಜುನಾಥ್, ಗುರುಪ್ಪ, ತಿಪ್ಪಸಂದ್ರ ಹರೀಶ್, ಶ್ರೀನಿವಾಸ್, ಸತೀಶ್, ಶ್ಯಾಮಸುಂದರ್, ಶಿವಕುಮಾರ್, ಚೌಡಪ್ಪ, ಸೀನಪ್ಪ ಇದ್ದರು.

Leave a Reply

Your email address will not be published. Required fields are marked *