ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರಪರಿಹಾರ

 

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ
ಉದ್ದೇಶದಿಂದ, ಸರ್ಕಾರದ ಇನ್‌ಪುಟ್ ಸಬ್ಸಿಡಿ ಬರಪರಿಹಾರ ನಿರೀಕ್ಷೆಯಲ್ಲಿದ್ದು, ಜಿಲ್ಲೆಯ ಎಲ್ಲಾ 4 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಪರಿಹಾರ ಸೌಲಭ್ಯವನ್ನು ಎಫ್‌ಐಡಿ (ಫಾರ್ಮರ್ ಐಡಿ) ಹೊಂದಿರುವ ಅರ್ಹ ರೈತರಿಗೆ ಮಾತ್ರ ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಒಟ್ಟು 5,25,904 ರೈತರಿದ್ದು ಈ ಪೈಕಿ 2,96,097 ರೈತರು (ಶೇ.56.30) ಎಫ್‌ಐಡಿ ಹೊಂದಿದ್ದಾರೆ. ಇನ್ನೂ 2,29,807 ರೈತರ ಎಫ್‌ಐಡಿ ಮಾಡಿಸಿಕೊಳ್ಳ ಬೇಕು.

ಎಫ್‌ಐಡಿ ಹೊಂದಿರದ ರೈತರು ತಮ್ಮ ಎಲ್ಲಾ ಪಹಣಿಗಳು, ಆಧಾರ್‌ಕಾರ್ಡ್‌ ಹಾಗೂ ಬ್ಯಾಂಕ್ ಪಾಸ್‌ಬುಕ್‌ಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಪಶುಸಂಗೋಪನಾ ಇಲಾಖೆ ಅಥವಾ ಕಂದಾಯ ಇಲಾಖೆಯ ಕಚೇರಿಗೆ ಭೇಟಿ ನೀಡಿ ಎಫ್‌ಐಡಿ ಸೃಜಿಸಿಕೊಳ್ಳಬೇಕು.

ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೇ ನಂಬರ್ ಗಳಿಗೆ ಸಂಬಂಧಿಸಿದ ಎಫ್‌ಐಡಿಗೆ ಜೋಡಣೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಎಫ್‌ಐಡಿಗೆ ಜೋಡಣೆಯಾಗದಿರುವ ಸರ್ವೇ ನಂಬರ್‌ಗಳಿದ್ದಲ್ಲಿ ಸಂಬಂಧಿಸಿದ ಇಲಾಖೆಯ ಮೂಲಕ ಅವುಗಳನ್ನು ಕೂಡಲೇ ಎಫ್‌ಐಡಿಗೆ ಜೋಡಿಸಿಕೊಳ್ಳಬೇಕು.

ಬರ ಪರಿಹಾರ ಸೌಲಭ್ಯ ಪಡೆಯುವಲ್ಲಿ ಯಾವುದೇ ರೀತಿಯ ವಿಳಂಬ ಉಂಟಾಗದಂತೆ ಜಿಲ್ಲೆಯ ರೈತರು ಈ ಪ್ರಕ್ರಿಯೆಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

2 hours ago

ಉರ್ದು ಹಬ್ಬವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ನಿಖಿಲ್ ಕುಮಾರಸ್ವಾಮಿ

ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…

3 hours ago

ಜಿಲ್ಲೆಯಲ್ಲಿ ಪಾತಾಳ ಮುಟ್ಟಿದ ಅಂತರ್ಜಲ! ಕೊಳವೆಬಾವಿಗಳ ಅತಿಯಾದ ಬಳಕೆ, ಮಳೆ ಕೊರತೆ; 1,250 ಅಡಿಯಲ್ಲೂ ನೀರು ಸಿಗುವುದು ಅನುಮಾನ

ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…

12 hours ago

ಕಸಾಪ ಪುನಶ್ಚೇತನಕ್ಕೆ ಚಿಂತನೆ: ಡಾ. ಸಿ. ಸೋಮಶೇಖರ್

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಸ್ವಾಭಿಮಾನದ ಗೌರವ ಸಂಸ್ಥೆಯಾಗಿ ರೂಪಿಸುವುದರ ಜೊತೆಗೆ, ಪರಿಷತ್ತಿಗೆ ಕಾಯಕಲ್ಪ ನೀಡುವ ಉದ್ದೇಶ ಹೊಂದಲಾಗಿದೆ…

13 hours ago

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

1 day ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

1 day ago